ಕೋಲ್ಕತ:ಕರೊನಾ ಸೋಂಕು ದೇಶಾದ್ಯಂತ ಶರವೇಗದಲ್ಲಿ ಹಬ್ಬುತ್ತಿದೆ. ಪ್ರತಿನಿತ್ಯ ಸಾವಿರಾರು ಜನರು ಸೋಂಕಿಗೆ ಬಲಿಯಾಗುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಮತ್ತು ಅವರ ಸಂಬಂಧಿಕರೂ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಅದೇ ರೀತಿ ಇದೀಗ ಗಾಯಕ ಅರ್ಜಿತ್​ ಸಿಂಗ್​ ಅವರ ತಾಯಿ ಕೂಡ ಸೋಂಕಿನಿಂದಾಗಿ ಕೊನೆಯುಸಿರೆಳೆದಿದ್ದಾರೆ.
ಅರ್ಜಿತ್ ಅವರ ತಾಯಿಗೆ ಕೆಲ ದಿನಗಳ ಹಿಂದೆ ಸೋಂಕು ದೃಢವಾಗಿದ್ದು, ಅವರನ್ನು ಕೋಲ್ಕತ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ತೂವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಅಸು ನೀಗಿದ್ದಾರೆ.
ಗಾಯಕನ ತಾಯಿ ಆಸ್ಪತ್ರೆಗೆ ಸೇರಿರುವ ವಿಚಾರವನ್ನು ಮೊದಲು ನಟಿ ಸ್ವಸ್ತಿಕಾ ಮುಖರ್ಜಿ ಸಾಮಾಜಿಕವಾಗಿ ತಿಳಿಸಿದ್ದರು. ಆಸ್ಪತ್ರೆಯಲ್ಲಿದ್ದ ಅವರಿಗೆ ಎ ನೆಗೆಟಿವ್​ ರಕ್ತದ ಅವಶ್ಯಕತೆ ಇದೆ, ಯಾರಾದರೂ ಮುಂದೆ ಬಂದು ರಕ್ತದಾನ ಮಾಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೋರಿಕೊಂಡಿದ್ದರು. ಅದಾದ ನಂತರ ಆ ಟ್ವೀಟ್​ನ್ನು ತೆಗೆದುಹಾಕಿದ್ದರು. (ಏಜೆನ್ಸೀಸ್)
ಮದುವೆಗೆ ಹೋಗೋ ಮುನ್ನ ಎಚ್ಚರ​! ಅಕ್ಷತೆ ಹಾಕುವ ಬದಲು ಕಪ್ಪೆ ಓಟ ಮಾಡಬೇಕಾದೀತು ಹುಷಾರ್​..

ನಿಂತಿದ್ದ ಆ್ಯಂಬುಲೆನ್ಸ್​ ಅಲ್ಲಾಡುತ್ತಿತ್ತು; ಹತ್ತಿರ ಹೋಗಿ ನೋಡಿದ ಪೊಲೀಸರಿಗೆ ಕಂಡಿದ್ದು ಬೇರೆಯದ್ದೇ ದೃಶ್ಯ!

ಕರೊನಾ ಮೂರನೇ ಅಲೆ ದೇಶಕ್ಕೆ ಕಾಲಿಟ್ಟೇ ಬಿಡ್ತಾ? ಆತಂಕಕಾರಿ‌ ಮಾಹಿತಿ ಹೊರಹಾಕಿದ ವಿಧಿ ವಿಜ್ಞಾನ ತಜ್ಞ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 2 =
Remember me
