ನವದೆಹಲಿ:ಲಡಾಖ್​ನ ಪೂರ್ವಭಾಗದ ವಾಸ್ತವ ಗಡಿರೇಖೆ ಬಳಿಯ ವಾಸ್ತವ ಪರಿಸ್ಥಿತಿ ಅರಿಯಲು ಹಾಗೂ ಚೀನಾದ ಮಿಲಿಟರಿ ಅಧಿಕಾರಿಗಳೊಂದಿಗೆ ನಡೆದಿರುವ ಮಾತುಕತೆಯ ವಿವರ ಪಡೆಯಲು ಲಡಾಖ್​ಗೆ ತೆರಳಿರುವ ಸೇನಾಪಡೆ ಮುಖ್ಯಸ್ಥ ಜನರಲ್​ ಎಂ.ಎಂ. ನರವಾನೆ, ಗಲ್ವಾನ್​ ಘರ್ಷಣೆಯಲ್ಲಿ ಗಾಯಗೊಂಡ ಭಾರತೀಯ ಯೋಧರ ಆರೋಗ್ಯ ವಿಚಾರಿಸಿದರು.
ಲೇಹ್​ನ ಮಿಲಿಟರಿ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬ ಯೋಧರ ಬಳಿ ಹೋಗಿ ಯೋಗಕ್ಷೇಮ ವಿಚಾರಿಸಿದರು. ಸಾಂತ್ವನ ಹೇಳಿದರು.

ಜೂ.15ರಂದು ಗಲ್ವಾನ್​ ನದಿ ಮತ್ತು ಶಿಯಾಕ್​ ನದಿಯ ಸಂಗಮ ಸ್ಥಳದ ವೈ ಜಂಕ್ಷನ್​ನಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ರಕ್ತಸಿಕ್ತ ಘರ್ಷಣೆ ಏರ್ಪಟ್ಟು ಭಾರತದ 20 ಯೋಧರು ಹುತಾತ್ಮರಾಗಿದ್ದರು. 76ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದರು.
ಭಾರತ ಮತ್ತು ಚೀನಾದ ಹಿರಿಯ ಮಿಲಿಟರಿ ಅಧಿಕಾರಿಗಳು ಗಲ್ವಾನ್​ ಘರ್ಷಣೆ ಮತ್ತು ಇತರ ವಿವಾದಾತ್ಮಕ ವಿಷಯಗಳ ಬಗ್ಗೆ ಸೋಮವಾರ ಬೆಳಗ್ಗೆಯಿಂದ ತಡರಾತ್ರಿಯವರೆಗೆ ಸತತ 11 ಗಂಟೆ ಮಾತುಕತೆ ನಡೆಸಿದ್ದರು. ಲಡಾಖ್​ನ ಚುಶುಲ್​ನಲ್ಲಿ ಚೀನಾದ ಪ್ರದೇಶದಲ್ಲಿರುವ ಮಾಲ್ಡೋದಲ್ಲಿ ನಡೆದ ಮಾತುಕತೆಯ ಬೆನ್ನಲ್ಲೇ ಸೇನಾಪಡೆ ಮುಖ್ಯಸ್ಥ ಜನರಲ್​ ಎಂ.ಎಂ. ನರವಾನೆ ಲಡಾಖ್​ಗೆ ಭೇಟಿ ನೀಡಿದ್ದಾರೆ.
ಪೊಲೀಸರಿಗೆ ಪ್ರತ್ಯೇಕ ಕೋವಿಡ್ ಪರೀಕ್ಷಾ ಕೇಂದ್ರ ಆರಂಭ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + fifteen =
Remember me
