ಉಡುಪಿ:ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಸಭಾ ಸದಸ್ಯರಾದ ಸುಬ್ರಮಣ್ಯ ಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಸಂತಾಪ ಸೂಚಿಸಿದ್ದಾರೆ.
ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್​ ಅಪಘಾತದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್​ ರಾವತ್ ನಿಧರಾಗಿದ್ದು, ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದಾರೆ.
ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಸುಬ್ರಮಣ್ಯಸ್ವಾಮಿ, ಘಟನೆಯಿಂದ ನನಗೆ ಶಾಕ್ ಆಗಿದೆ. ಈ ಪ್ರಕರಣದ ಬಗ್ಗೆ ಗಂಭೀರ ತನಿಖೆ ಆಗಬೇಕಿದೆ. ಕೇವಲ ಸಾಮಾನ್ಯ ತನಿಖೆ ನಡೆಸಿದರೆ ಪ್ರಯೋಜನವಿಲ್ಲ. ಹಿರಿಯ ಸುಪ್ರೀಂಕೋರ್ಟ್ ಜಡ್ಜ್ ಮೂಲಕ ತನಿಖೆ ನಡೆಸಬೇಕು. ಈ ಬಗ್ಗೆ ಪ್ರಧಾನಿಗಳು ಜನರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ.
ದೇಶದ ಸುರಕ್ಷತೆಯ ದೃಷ್ಟಿಯಿಂದ ಇದೊಂದು ಗಂಭೀರ ಎಚ್ಚರಿಕೆಯಾಗಿದೆ. ಈಗ ತಾನೆ ಘಟನೆ ನಡೆದಿರುವುದರಿಂದ ಹೆಚ್ಚಿನ ಮಾಹಿತಿ ನನ್ನಲ್ಲಿ ಇಲ್ಲ ಎಂದು ರಾಜ್ಯಸಭಾ ಸದಸ್ಯರಾದ ಸುಬ್ರಮಣ್ಯ ಸ್ವಾಮಿ ಪ್ರತಿಕ್ರಿಯೆ ನೀಡಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine − 5 =
Remember me
