ಜೈಪುರ:ವಿಚಾರ ಒಂದಕ್ಕೆ ಅಣ್ಣ-ತಮ್ಮನ ನಡುವೆ ಶುರುವಾದ ಜಗಳ ಒಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ಭಾರತೀಯ ಸೇನೆಯಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಧೀರ್​ ಸಿಂಗ್​(43) ತನ್ನ ಸಹೋದರ ಹೀರಾ ಸಿಂಗ್​(40)ನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿ ಭೂಪೇಂದ್ರ ಸಿಂಗ್​ ಜೈಪುರದ ಬಿಂದಯಾಕ ಪ್ರದೇಶದ ನಿವಾಸಿಗಳಾದ ಧೀರ್​ ಸಿಂಗ್​ ಹಾಗೂ ಆತನ ಹೀರಾ ಸಿಂಗ್​ ನಡುವೆ ವಿಚಾರ ಒಂದಕ್ಕೆ ಗಲಾಟೆ ಶುರುವಾಗಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಧೀರ್​ ಸಿಂಗ್​ ತನ್ನ ಬಳಿ ಇದ್ದ​ ಗನ್​ನಿಂದ ಸಹೋದರನ ಭುಜಕ್ಕೆ ಗುಂಡು ಹಾರಿಸಿದ್ದಾನೆ.
ಇದನ್ನೂ ಓದಿ:VIDEO| ವಿವಾಹಿತನಿಗಾಗಿ ಹೊಡೆದಾಡಿಕೊಂಡ ಮಹಿಳೆಯರು
ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಹೀರಾ ಸಿಂಗ್​ ಮೃತಪಟ್ಟಿದ್ದಾರೆ. ಪ್ರಕರಣ ಆರೋಪಿ ಧೀರ್​ ಸಿಂಗ್​ ವಿರುದ್ಧ ಭಾರತ ದಂಡ ಸಂಹಿತೆ(IPC Section) 302ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆಯಲಾಗಿದೆ.
ಆರೋಪಿಯಿಂದ 12 ಬೋರ್ ಪರವಾನಗಿ ಪಡೆದ ರೈಫಲ್ ಮತ್ತು ಎರಡು ಶೆಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್​ ಅಧಿಕಾರಿ ಭೂಪೇಂದ್ರ ಸಿಂಗ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + eight =
Remember me
