ಇಂಫಾಲ್:ಗಲಭೆ ಪೀಡಿತ ಮಣಿಪುರದಲ್ಲಿ ಭಾರತೀಯ ಸೇನೆಯ ಯೋಧನನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯೂ ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ಖುನಿಂಗ್‌ಥೆಕ್ ಗ್ರಾಮದಲ್ಲಿ ನಡೆದಿದೆ.
ಹುತಾತ್ಮ ಯೋಧನನ್ನು ಕಾಂಗ್‌ಪೊಕ್ಪಿ ಜಿಲ್ಲೆಯ ಲೀಮಾಖೋಂಗ್‌ನಲ್ಲಿ ಸೇನೆಯ ಡಿಫೆನ್ಸ್ ಸೆಕ್ಯುರಿಟಿ ಕಾರ್ಪ್ಸ್(ಡಿಎಸ್‌ಸಿ) ಯೋಧ ಸೆರ್ಟೊ ತಂಗ್‌ಥಾಂಗ್ ಕೋಮ್ ಎಂದು ಗುರುತಿಸಲಾಗಿದ್ದು, ಅವರು ಇಂಫಾಲ್ ಪಶ್ಚಿಮದ ತರುಂಗ್‌ನವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಏಷ್ಯಾಕಪ್​ 2023| ಶ್ರೀಲಂಕಾ ವಿರುದ್ಧ 10ವಿಕೆಟ್​ ಜಯ; 8ನೇ ಬಾರಿಗೆ ಕಪ್​ ಗೆದ್ದು ಬೀಗಿದ ಭಾರತ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು ಶನಿವಾರ ಬೆಳಗ್ಗೆ 10 ಘಂಟೆ ಸುಮಾರಿಗೆ ಮೂವರು ಶಸ್ತ್ರಸಜ್ಜಿತ ವ್ಯಕ್ತಿಗಳು ರಜೆಯಲ್ಲಿದ್ದ ಸೆರ್ಟೊ ತಂಗ್‌ಥಾಂಗ್ ಕೋಮ್ ಅವರನ್ನು ಅವರ ಮನೆಯಿಂದ ಅಪಹರಿಸಿದ್ದಾರೆ. ಕೋಮ್​ ಅವರ ಮಗ ಹೇಳುವ ಪ್ರಕಾರ ಅವರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಪಹರಿಸಿದ್ದಾರೆ.
ಮೂವರು ವ್ಯಕ್ತಿಗಳು ಕೋಮ್​ ಅವರ ಹಣೆಯ ಮೇಲೆ ಬಂದೂಕನ್ನು ಇಟ್ಟು ಬಲವಂತೆವಾಗಿ ಅವರನ್ನು ಎಳೆದೊಯ್ದಿದ್ದಾರೆ. ಭಾನುವಾರ ಬೆಳಗ್ಗೆ 9:30ರ ಸುಮಾರಿಗೆ ಅವರ ಮೃತದೇಹವು ಇಂಫಾಲ್ ಪೂರ್ವ ಜಿಲ್ಲೆಯ ಖುನಿಂಗ್‌ಥೆಕ್ ಗ್ರಾಮದಲ್ಲಿ ಪತ್ತೆಯಾಗಿತ್ತು. ಹತ್ಯೆಯಾಗಿರುವ ವ್ಯಕ್ತಿ ಕೋಮ್​ ಎಂದು ಅವರ ಸಹೋದರ ಮತ್ತು ಅಳಿಯ ಗುರುತಿಸಿದ್ಧಾರೆ. ಅವರ ತೆಲೆಗೆ ಗುಂಡಿಟ್ಟು ಹತ್ಯೆ ಮಾಡಲಾಗಿದೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:nineteen − eighteen =
Remember me
