ಹೈದರಾಬಾದ್​:ಶಾಲಾ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಅಪ್ರಾಪ್ತರಲ್ಲಿ ಟಿಆರ್​ಎಸ್​ ಮುಖಂಡನ ಪುತ್ರನೂ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಹೈದರಾಬಾದ್​ನ ಜುಬ್ಲೀ ಹಿಲ್ಸ್​​ನಲ್ಲಿ ಕಳೆದ ವಾರ ಶಾಲಾಬಾಲಕಿಯ ಮೇಲೆ ನಾಲ್ವರು ಅಪ್ತಾಪ್ತರಿಂದ ಅತ್ಯಾಚಾರ ನಡೆದಿತ್ತು. ಈ ನಾಲ್ವರ ಪೈಕಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್​ ಅವರ ಪಕ್ಷದ ಪ್ರಮುಖ ಮುಖಂಡನ ಮಗನೂ ಸೇರಿದ್ದಾನೆ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ. ಇನ್ನು ಪ್ರಕರಣದಲ್ಲಿ ಗೃಹ ಸಚಿವರ ಮೊಮ್ಮಗನ ವಿರುದ್ಧವೂ ಆರೋಪ ಕೇಳಿಬಂದಿದ್ದು, ಸದ್ಯ ಈ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದಾರೆ.
ಸದುದ್ದೀನ್​ ಮಲಿಕ್ ಎಂದು ಗುರುತಿಸಲಾಗಿದ್ದು, 17 ವರ್ಷದ ಈತ ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಮೇ 28 ರಂದು ಪಾರ್ಟಿ ನಡೆಸಿ ಸ್ನೇಹಿತರೊಂದಿಗೆ ವಾಪಸ್​ ಬರುತ್ತಿದ್ದ ವೇಳೆ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಸದ್ಯ ಪ್ರಕರಣದಲ್ಲಿ ದೊಡ್ಡ ದೊಡ್ಡ ರಾಜಕೀಯ ಮುಖಂಡರ ಮಕ್ಕಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
