ನವದೆಹಲಿ:ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ 370ನೇ ವಿಧಿ ರದ್ದತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್​ 2ರಿಂದ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.
370ನೇ ವಿಧಿ ರದ್ದತಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸಿಜೆಐ ಡಿ.ವೈ. ಚಂದ್ರಚೂಡ್​, ಸಂಜಯ್​ ಕಿಶನ್​ ಕೌಲ್​, ಸಂಜೀವ್​ ಖನ್ನಾ, ಬಿ.ಆರ್​. ಗವಾಯಿ ಮತ್ತು ಸೂರ್ಯಕಾಂತ್​ ಅವರನ್ನೊಳಗೊಂಡ ಪೀಠವು ತಿಳಿಸಿದೆ.
ಇದನ್ನೂ ಓದಿ:ಕಾಂಗ್ರೆಸ್​ ಅಡಳಿತದಲ್ಲಿ ಗೂಂಡಾ ರಾಜಕಾರಣ ರಾರಾಜಿಸುತ್ತಿದೆ: ನಳಿನ್​ ಕುಮಾರ್​ ಕಟೀಲ್
ಸೋಮವಾರ-ಶುಕ್ರವಾರ ಹೊರತುಪಡಿಸಿ ಉಳಿದೆಲ್ಲ ದಿನವೂ ಅರ್ಜಿಗಳ ವಿಚಾರಣೆ ನಡೆಸಲಾಗುವುದು ಎಂದು ಪೀಠ ಹೇಳಿದೆ. ಪ್ರಕರಣ ಸಂಬಂಧ ಅರ್ಜಿದಾರರ ಹಾಗೂ ಸರ್ಕಾರದ ಕಡೆಯಿಂದ ತಲಾ ಇಬ್ಬರು ವಕೀಲರನ್ನು ನೇಮಿಸಲಾಗಿದೆ. ಇವರುಗಳು ಅರ್ಜಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಆಗಸ್ಟ್​ 5, 2019ರ ಮಳೆಗಾಲದ ಅಧಿವೇಶನದಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ರದ್ದು ಮಾಡಿ ರಾಜ್ಯಗಳನ್ನು ವಿಭಜಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + six =
Remember me
