ಶ್ರೀನಗರ:ಸಂವಿಧಾನದ 370ನೇ ವಿಧಿಯ ನಿಬಂಧನೆಗಳನ್ನು ಕೇಂದ್ರವು 2019ರ ಆಗಸ್ಟ್‌ನಲ್ಲಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರ (ಡಿ.11) ತೀರ್ಪು ಪ್ರಕಟಿಸಲಿದ್ದು, ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣ ಕಾಪಾಡಿಕೊಳ್ಳಲು ಇದೀಗ ಭಾರೀ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.
ಇದನ್ನೂ ಓದಿ:ಬಸ್ ಹತ್ತುವಾಗ ಹಿಂಬದಿ ಚಕ್ರಕ್ಕೆ ಸಿಲುಕಿ ಮಂಡ್ಯದಲ್ಲಿ ಮಹಿಳೆ ಸಾವು
ಆಗಸ್ಟ್ 5, 2019 ರಂದು ಕೇಂದ್ರವು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಮತ್ತು 370ನೇ ವಿಧಿಯ ನಿಬಂಧನೆಗಳ ರದ್ದತಿಯನ್ನು ಪ್ರಶ್ನಿಸುವ ಅರ್ಜಿಗಳನ್ನು ತೀರ್ಪು ಪ್ರಕಟಿಸಲು ಸುಪ್ರೀಂ ಕೋರ್ಟ್ ಪಟ್ಟಿ ಮಾಡಿದೆ.
ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು ಆಗಸ್ಟ್ 2ರಿಂದ ಈ ವಿಷಯದಲ್ಲಿ ದೈನಂದಿನ ವಿಚಾರಣೆಗಳನ್ನು ನಡೆಸಿದ ಬಳಿಕ ಸೆಪ್ಟೆಂಬರ್ 5 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತು.
ಇದನ್ನೂ ಓದಿ:‘ಕೋಟ್ಯಾಂತರ ಹಿಂದೂಗಳ ಕನಸು ನನಸಾಗಿದೆ’: ಭವ್ಯವಾದ ರಾಮಮಂದಿರದ ವಿಡಿಯೋ ಹಂಚಿಕೊಂಡ ಕೆಸಿಆರ್ ಪುತ್ರಿ ಕವಿತಾ
“ನಾವು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ ಮತ್ತು ಕಾಶ್ಮೀರದಲ್ಲಿ ಶಾಂತಿ ಕದಡದಂತೆ ನೋಡಿಕೊಳ್ಳುತ್ತೇವೆ. ಎಲ್ಲಾ ಸಂದರ್ಭಗಳಲ್ಲಿಯೂ ಕಣಿವೆಯಲ್ಲಿ ಶಾಂತಿ ನೆಲೆಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಕರ್ತವ್ಯ ಬದ್ಧರಾಗಿದ್ದೇವೆ” ಎಂದು ಕಾಶ್ಮೀರ ವಲಯದ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (IGP) ವಿ.ಕೆ. ಬಿರ್ಡಿ ಹೇಳಿದ್ಧಾರೆ,(ಏಜೆನ್ಸೀಸ್).
BBKS10: ಬಿಗ್ ಬಾಸ್​ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮನೆಯ ಸದಸ್ಯರು! ಕಾರಣ ಹೀಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
