ನವದೆಹಲಿ: ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಬೆಳಗ್ಗೆ 6 ಗಂಟೆಗೆ ಆರಂಭವಾಗಿದ್ದು,ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಭಾರಿ ಮುನ್ನಡೆಯತ್ತ ಸಾಗಿದೆ. ಈಗಾಗಲೇ 10 ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿರುವ ಬಿಜೆಪಿ, ಉಳಿದ 50 ಕ್ಷೇತ್ರಗಳ ಪೈಕಿ 34ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಉಳಿದಂತೆ ಎನ್‌ಪಿಇಪಿ 6ರಲ್ಲಿ ಹಾಗೂ ಇತರ ಪಕ್ಷಗಳು 8 ಕಡೆ ಮುನ್ನಡೆಯಲ್ಲಿವೆ.
ಇದನ್ನೂ ಓದಿ:ದೇವಭೂಮಿಯಲ್ಲಿ ತಲೈವಾ..ಹಿಮಾಲಯದಲ್ಲಿ ರಜನಿಕಾಂತ್​ ಹೋಗಿದ್ದೆಲ್ಲಿಗೆ?
2019ರ ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 41 ಸ್ಥಾನಗಳನ್ನು ಗೆದ್ದು ಪೆಮಾ ಖಂಡು ಮತ್ತೊಮ್ಮೆ ಮುಖ್ಯಮಂತ್ರಿಯಾಗಿದ್ದರು. ಕಾಂಗ್ರೆಸ್ ಕೇವಲ 4 ಸ್ಥಾನಗಳನ್ನು ಗೆದ್ದಿತ್ತು. 2014ರ ಅರುಣಾಚಲ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ 42 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ ಕೇವಲ 11 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
ಇನ್ನು ಸಿಕ್ಕಿಂನಲ್ಲಿ ಆಡಳಿತಾರೂಢ ಎಸ್‌ಕೆಎಂ ಭಾರಿ ಬಹುಮತ ಸಾಧಿಸುವ ಲಕ್ಷಣಗಳು ಕಂಡುಬಂದಿವೆ. ಇಲ್ಲಿನ 32 ವಿಧಾನಸಭಾ ಸ್ಥಾನಗಳ ಪೈಕಿ 31ರಲ್ಲಿ ಮುನ್ನಡೆ ಸಾಧಿಸಿದೆ. ಪ್ರಮುಖ ವಿರೋಧ ಪಕ್ಷ ಎಸ್‌ಡಿಎಫ್‌ ಒಂದು ಕಡೆಯಷ್ಟೇ ಮುನ್ನಡೆಯಲ್ಲಿದೆ.
ಈ ಎರಡೂ ರಾಜ್ಯಗಳಲ್ಲಿ ಏಪ್ರಿಲ್ 19ರಂದು ಒಂದೇ ಹಂತದಲ್ಲಿ ಮತದಾನ ನಡೆದಿರುವುದು ಗೊತ್ತೇ ಇದೆ.
ವಿಧಾನಪರಿಷತ್​ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 8 =
Remember me
