ನವದೆಹಲಿ:ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಾಜಿ ಆಪ್ತ ಸಹಾಯಕ ಬಿಭವ್ ಕುಮಾರ್‌ಗೆ ಸುಪ್ರೀಂ ಕೋರ್ಟ್ ಇಂದು (ಸೋಮವಾರ) ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ:Telangana Rains: ತೆಲಂಗಾಣದಲ್ಲಿ ಭಾರೀ ಮಳೆ, 16 ಮಂದಿ ಸಾವು! ‘ರಾಷ್ಟ್ರೀಯ ವಿಪತ್ತು’ ಘೋಷಣೆಗೆ ಆಗ್ರಹ
ಪ್ರಕರಣದ ಎಲ್ಲಾ ಪ್ರಮುಖ ಸಾಕ್ಷಿಗಳನ್ನು ವಿಚಾರಣೆ ಮಾಡುವವರೆಗೆ ಬಿಭವ್ ಕುಮಾರ್ ಅವರು ಸಿಎಂ ಆಪ್ತ ಕಾರ್ಯದರ್ಶಿ ಹುದ್ದೆಯನ್ನು ಪುನರಾರಂಭಿಸದಂತೆ ಅಥವಾ ಮುಖ್ಯಮಂತ್ರಿ ನಿವಾಸಕ್ಕೆ ಪ್ರವೇಶಿಸದಂತೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಹೇಳಿದೆ.
ಕುಮಾರ್ ಅವರನ್ನು ಮತ್ತೆ ಆಪ್ತ ಸಹಾಯಕರನ್ನಾಗಿ ನಿಯೋಜಿಸಿಕೊಳ್ಳಬಾರದು ಅಥವಾ ಮುಖ್ಯಮಂತ್ರಿ ಕಚೇರಿಯಲ್ಲಿ ಯಾವುದೇ ಅಧಿಕೃತ ಹುದ್ದೆ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೇ 18 ರಂದು ಬಂಧಿತರಾಗಿದ್ದ ಬಿಭವ್​ ಕುಮಾರ್‌ಗೆ 100 ದಿನಗಳ ನಂತರ ನ್ಯಾಯಾಲಯ ಜಾಮೀನು ನೀಡಿದೆ.
ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಮೇ 18 ರಂದು ಅರವಿಂದ್​ ಕೇಜ್ರಿವಾಲ್ ಅವರ ನಿವಾಸದಿಂದ ಕುಮಾರ್ ಅವರನ್ನು ಬಂಧಿಸಿದ್ದರು.
ಪ್ರಥಮ ಮಾಹಿತಿ ವರದಿಯಲ್ಲಿ, ಸಿಎಂ ಸಿವಿಲ್ ಲೈನ್ಸ್ ನಿವಾಸದಲ್ಲಿ ಮಾತಿನಲ್ಲಿ ನಿಂದಿಸಿ, ಹಲ್ಲೆ ನಡೆಸಿರುವುದಾಗಿ ಮಲಿವಾಲ್ ಆರೋಪಿಸಿದ್ದರು. ಮೇ 13 ರಂದು ದೆಹಲಿ ಸಿಎಂ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಈ ಘಟನೆಯಲ್ಲಿ ತನ್ನ ಅಂಗಿಯನ್ನು ಎಳೆದು ಹಲ್ಲೆ ನಡೆಸಿರುವುದಾಗಿ ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕ ಬದಲಾವಣೆ; ಅ.5ಕ್ಕೆ ಮತದಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 14 =
Remember me
