ನವದೆಹಲಿ:ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.
ಅಬಕಾರಿ ನೀತಿ ಜಾರಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ ಆರು ಬಾರಿ ಇಡಿ ಅವರಿಗೆ ಸಮನ್ಸ್​​​ ನೀಡಿತ್ತು ಒಂದಕ್ಕೂ ಉತ್ತರ ನೀಡಿಲ್ಲ. ಈ ಕಾರಣಕ್ಕೆ ಕೋರ್ಟ್​​​ ಅವರಿಗೆ ವಿಚಾರಣೆ ಬರುವಂತೆ ಆದೇಶವನ್ನು ನೀಡಿತ್ತು.
ಇದನ್ನೂ ಓದಿ:ಕೆರೆಗೆ ಸೇರುತ್ತಿರುವ ತ್ಯಾಜ್ಯ ನೀರು; ಸಾವಿರಾರು ಮೀನುಗಳ ಮಾರಣ ಹೋಮ
ಕೋರ್ಟ್​​ ಆದೇಶದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ದೆಹಲಿಯಲ್ಲಿ ವಿಧಾನಸಭೆ ಕಲಾಪ ನಡೆಯುತ್ತಿದ್ದು, ಇಂದು ವಿಶ್ವಾಸ ಮತಯಾಚನೆ ನಡೆಯಲಿದೆ. ಆ ಕಾರಣದಿಂದ ದೈಹಿಕವಾಗಿ ಸದನದಲ್ಲಿ ಹಾಜರಾಗಬೇಕು ಅದಕ್ಕಾಗಿ ಕೋರ್ಟ್​​ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಹಾಜರಾಗುತ್ತಿದ್ಧೇನೆ. ಮುಂದಿನ ಬಾರಿ  ವಿಚಾರಣೆಗೆ ದೈಹಿಕವಾಗಿ ಹಾಜರಾಗುವುದಾಗಿ ಕೇಜ್ರಿವಾಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಅರವಿಂದ್​​​ ಕೇಜ್ರಿವಾಲ್​​ ಅವರು ಇಂದು ದೆಹಲಿ ವಿಧಾನಸಭೆಯ ಮುಂದೆ ತನ್ನ ಸರ್ಕಾರದ ಬಲವನ್ನು ಹಾಗೂ ವಿಶ್ವಾಸವನ್ನು ಮಂಡಿಸಲಿದ್ದಾರೆ. ವಿಶ್ವಾಸಮತ ಯಾಚನೆಗೆ ನೆನ್ನೆ (ಫೆ.16) ನಿರ್ಣಯವನ್ನು ಮಂಡಿಸಿದ್ದಾರೆ. ದೆಹಲಿಯಲ್ಲಿ ವಿಧಾಸಭೆ ಕಲಾಪ ನಡೆಯುತ್ತಿದ್ದು, ಬಜೆಟ್​​​ ಮಂಡನೆಗೂ ಮುನ್ನ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
