ನವದೆಹಲಿ:ಅಕ್ರಮ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬುಧವಾರ (ಜೂನ್​ 26) ಬಂಧಿಸಿದೆ. ನ್ಯಾಯಾಲಯದಲ್ಲಿ ಎಎಪಿ ಮುಖ್ಯಸ್ಥರನ್ನು ಪರೀಕ್ಷಿಸಲು ಸಿಬಿಐಗೆ ರೋಸ್​ ಅವೆನ್ಯೂ ಕೋರ್ಟ್​ ಅನುಮತಿ ನೀಡಿದ ಬಳಿಕ ಬಂಧನವಾಗಿದೆ.
CBI informs the court that they have formally arrested Delhi CM Arvind Kejriwal and supplies all the required documents.
— ANI (@ANI)June 26, 2024

ಸಿಬಿಐ ಬಂಧನದ ನಂತರ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನಿಗೆ ತಡೆ ನೀಡಿ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಕೇಜ್ರಿವಾಲ್​ ಹಿಂಪಡೆದಿದ್ದಾರೆ.
ಅಕ್ರಮ ಮದ್ಯ ನೀತಿ ಹಗರಣದಿಂದ ಉಂಟಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ ಬಂಧಿಸಿತು. ಕೇಜ್ರಿವಾಲ್​ ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ. ಇದರ ನಡುವೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕೇಜ್ರಿವಾಲ್​ಗೆ ವಿಚಾರಣಾ ನ್ಯಾಯಾಲಯ ಜಾಮೀನು ಸಹ ನೀಡಿತ್ತು. ಆದರೆ, ಆ ಜಾಮೀನಿಗೆ ತಡೆ ನೀಡುವಂತೆ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮನವಿಗೆ ದೆಹಲಿ ಹೈಕೋರ್ಟ್ ಬುಧವಾರ ಸಮ್ಮತಿ ಸೂಚಿಸಿತ್ತು. ಬಳಿಕ ಆಮ್​ ಆದ್ಮಿ ಪಕ್ಷ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಇಂದು ವಿಚಾರಣೆಗೂ ಮುನ್ನವೇ ಕೇಜ್ರಿವಾಲ್​ ಅವರನ್ನು ಸಿಬಿಐ ಬಂಧನ ಮಾಡಿದೆ.
ಕೇಜ್ರಿವಾಲ್ ಅವರನ್ನು ತಮ್ಮ ಕಸ್ಟಡಿಗೆ ನೀಡಬೇಕೆಂದು ಸಿಬಿಐ ರೂಸ್ ಅವೆನ್ಯೂ ನ್ಯಾಯಾಲಯದ ಮುಂದೆ ಕೋರಿತ್ತು.(ಏಜೆನ್ಸೀಸ್​)
18ನೇ ಲೋಕಸಭೆಯ ಸ್ಪೀಕರ್​ ಆಗಿ ಬಿಜೆಪಿ ಸಂಸದ ಓಂ ಬಿರ್ಲಾ ಆಯ್ಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 4 =
Remember me
