ನವದೆಹಲಿ:ಜನವರಿ 22ರಂದು ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಇದರ ನಡುವೆ ನಾಯಕರು, ಸೆಲೆಬ್ರೆಟಿಗಳು ಸೇರಿದಂತೆ ಹಲವರು ರಾಮ ಮಂದಿರಕ್ಕೆ ಭೇಟಿ ನೀಡುತ್ತಿದ್ದಾರೆ.ಇದೀಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಭಗವಂತ್ ಮಾನ್ ಹಾಗೂ ಕುಟುಂಬಸ್ಥರು ಆಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಎರಡು ರಾಜ್ಯದ ಸಿಎಂಗಳು ರಾಮ ಲಲ್ಲಾ ದರ್ಶನ ಪಡೆಯುವ ಕುರಿತು ಆಪ್ ಖಚಿತಪಡಿಸಿದೆ.
ಇದನ್ನೂ ಓದಿ:ದರ್ಶನ್ ಚಂದನವನ ಜರ್ನಿಗೆ 25 ವರ್ಷ: ಶ್ರೀರಂಗಪಟ್ಟಣದಲ್ಲಿ ಬೆಳ್ಳಿಪರ್ವ D-25 ಅದ್ಧೂರಿ ಉತ್ಸವ
ರಾಮ ಮಂದಿರ ಪ್ರಾಣಪ್ರತಿಷ್ಠೆ ದಿನ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್ ಸೇರಿದಂತೆ ಕೆಲ ನಾಯಕರಿಗೆ ಆಹ್ವಾನ ಸಿಕ್ಕಿರಲಿಲ್ಲ. ಈ ಕುರಿತು ಆರೋಪ ಪ್ರತ್ಯಾರೋಪಗಳು ನಡೆದಿತ್ತು. ಆದರೆ ಆಹ್ವಾನ ಸಿಗದೇ ಇರುವ ಕುರಿತು ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದರು. ರಾಮ ಮಂದಿರ ಪ್ರಾಣಪ್ರತಿಷ್ಠೆ ಬಳಿಕ ಆಯೋಧ್ಯೆಗೆ ತೆರಳಿ ರಾಮ ಮಂದಿರ ದರ್ಶನ ಪಡೆಯುವುದಾಗಿ ಹೇಳಿದ್ದರು. ಇದೀಗ ಫೆಬ್ರವರಿ 12ರಂದು ಅರವಿಂದ್ ಕೇಜ್ರಿವಾಲ್ ಹಾಗೂ ಮಾನ್ ಕುಟುಂಬ ಸಮೇತ ಆಯೋಧ್ಯೆ ದರ್ಶನ ಮಾಡುತ್ತಿದ್ದಾರೆ.

ಭಾನುವಾರ ಉತ್ತರ ಪ್ರದೇಶದ ಸಚಿವರು, ಶಾಸಕರು ಆಯೋಧ್ಯೆಗೆ ತೆರಳಿ ರಾಮಲಲ್ಲಾ ದರ್ಶನ ಪಡೆದಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಇಂದು ರಾಮ ಲಲ್ಲಾ ದರ್ಶನ ಪಡೆದಿದ್ದಾರೆ. ಬಿಜೆಪಿ ಸಚಿವರು, ಶಾಸಕರು ಮಾತ್ರವಲ್ಲ, ಕಾಂಗ್ರೆಸ್, ಮಾಯವತಿಯ ಬಹುಜನ ಸಮಾಜ್ ಪಾರ್ಟಿ, ರಾಜ್‌ಬಬ್ಬರ್ ನೇತೃತ್ವದ ಎಸ್‌ಬಿಎಸ್‌ಪಿ, ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕ ದಳ ಪಪಕ್ಷದ ಸದಸ್ಯರು ಬಸ್ ಮೂಲಕ ಆಯೋಧ್ಯೆಗೆ ತೆರಳಿ ರಾಮಮ ಲಲ್ಲಾ ದರ್ಶನ ಪಡೆದಿದ್ದಾರೆ.
ವಿರೋಧ ಪಕ್ಷದ ನಾಯಕ, ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ರಾಮ ಮಂದಿರ ದರ್ಶನ ಪ್ರವಾಸದಿಂದ ದೂರ ಉಳಿದಿದ್ದರು. ಅಲ್ಪಸಂಖ್ಯಾತರನ್ನು ಒಲೈಸಲು ಅಖಿಲೇಶ್ ಯಾದವ್ ರಾಮ ಮಂದಿರ ದರ್ಶನದಿಂದ ದೂರ ಉಳಿದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಮಹಾರಾಷ್ಟ್ರದ ಕ್ಯಾಬಿನೆಟ್ ಸಚಿವರು ಶೀಘ್ರವೇ ಅಯೋಧ್ಯೆಗೆ ಭೇಟಿ ನೀಡಿ ರಾಮ ಲಲ್ಲಾ ದರ್ಶನ ಪಡೆಯಲಿದ್ದಾರೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಜ.022 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಿತ್ತು. ಅಯೋಧ್ಯೆಗೆ ಮಹಾರಾಷ್ಟ್ರ ಸಚಿವರು ಭೇಟಿ ನೀಡುವ ವಿಷಯವಾಗಿ ಹೆಚ್ಚಿನ ಮಾಹಿತಿಯನ್ನು ಫಡ್ನವೀಸ್ ಹಂಚಿಕೊಂಡಿಲ್ಲ.

ಮುಸ್ಲಿಂ ಧರ್ಮದಲ್ಲಿ ಹುಟ್ಟುವ ಆಸೆಯಿದೆ ಎಂದಿದ್ದ ದೇವೇಗೌಡರು ಈಗ ಏನು ಹೇಳ್ತಾರೆ? ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − two =
Remember me
