ನವದೆಹಲಿ:ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್​ ಆದ್ಮಿ ಪಕ್ಷದಿಂದ ಟಿಕೆಟ್​ ನೀಡಲು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ 10-20 ಕೋಟಿ ರೂ.ಗೆ ಬೇಡಿಕೆ ಇಟ್ಟರು ಎಂದು ಆಪ್​ ತೊರೆದು ಕಾಂಗ್ರೆಸ್​ ಸೇರಿರುವ ದ್ವಾರಕ ನಗರದ ಶಾಸಕ ಆದರ್ಶ್​ ಶಾಸ್ತ್ರಿ ಗಂಭೀರ ಆರೋಪ ಮಾಡಿದ್ದಾರೆ.ಟಿಕೆಟ್​ ನೀಡಲು ನಿರಾಕರಿಸಿದ್ದಕ್ಕೆ ಶಾಸಕ ಆದರ್ಶ್​ ಶಾಸ್ತ್ರಿ ಶನಿವಾರವಷ್ಟೇ ಕಾಂಗ್ರೆಸ್​ ಪಕ್ಷವನ್ನು ಸೇರಿದ್ದಾರೆ. ಆಪ್​ ತೊರೆದ ಬೆನ್ನಲ್ಲೇ ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿರುವ ಶಾಸ್ತ್ರಿ, ಚುನಾವಣಾ ಟಿಕೆಟ್​ಗಾಗಿ 10 ರಿಂದ 20 ಕೋಟಿ ರೂ. ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಿದ್ದಾರೆ. ಆದಾಗ್ಯೂ ಆಪ್​ ಪಕ್ಷ ದ್ವಾರಕ ಕ್ಷೇತ್ರದಿಂದ ವಿನಯ್​ ಮಿಶ್ರಾ ಎಂಬುವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ.
ಆದರ್ಶ್​ ಶಾಸ್ತ್ರಿ ಅವರು ದೆಹಲಿಯ ಕಾಂಗ್ರೆಸ್​ ಘಟಕದಲ್ಲಿ ರಾಜ್ಯಾಧ್ಯಕ್ಷ ಸುಭಾಷ್​ ಚೋಪ್ರಾ ಹಾಗೂ ಎಐಸಿಸಿ ಉಸ್ತುವಾರಿ ಪಿ.ಸಿ. ಛಕೂ ಸಮ್ಮುಖದಲ್ಲಿ ಶನಿವಾರ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ.
ಮಾಜಿ ಪ್ರಧಾನಿ ಲಾಲ್​ ಬಹದ್ದೂರ್​ ಶಾಸ್ತ್ರಿ ಅವರ ಮೊಮ್ಮಗನಾಗಿರುವ ಆದರ್ಶ್​ ಶಾಸ್ತ್ರಿ ಆಮ್​ ಆದ್ಮಿ ಪಕ್ಷದಲ್ಲಿ ರಾಷ್ಟ್ರೀಯ ವಕ್ತಾರ ಮತ್ತು ಸಾಗರೋತ್ತರ ವ್ಯವಹಾರಗಳ ಸಹ-ಸಂಚಾಲಕರಾಗಿದ್ದರು.ದೆಹಲಿ ವಿಧಾನಸಭಾ ಚುನಾವಣೆ ಫೆ.8ರಂದು ನಡೆಯಲಿದ್ದು, 11ಕ್ಕೆ ಫಲಿತಾಂಶ ಹೊರಬೀಳಲಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − ten =
Remember me
