ಗುಜರಾತ್:ನಮ್ಮನ್ನು ಅಧಿಕಾರಕ್ಕೆ ತಂದರೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸಂಪೂರ್ಣ ಉಚಿತವಾಗಿ ಗುಣಮಟ್ಟದ ಶಿಕ್ಷಣ ಕೊಡುವುದಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಭರವಸೆ ನೀಡಿದ್ದಾರೆ. ಅಂದಹಾಗೆ ಅವರು ಉಚಿತ ಶಿಕ್ಷಣದ ಈ ಭರವಸೆ ನೀಡಿದ್ದು ಗುಜರಾತ್​ನಲ್ಲಿ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತ್​ಗೆ ಆಗಮಿಸಿ ಕಛ್ ಜಿಲ್ಲೆಯ ಭುಜ್​ನಲ್ಲಿ ಏರ್ಪಡಿಸಲಾಗಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅರವಿಂದ ಕೇಜ್ರಿವಾಲ್, ಆಮ್​ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತಂದರೆ ಗುಜರಾತ್​ನ ಎಲ್ಲ ಸರ್ಕಾರಿ ಶಾಳೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಉಚಿವಾಗಿ ನೀಡುವ ಭಾರಿ ಭರವಸೆಯನ್ನು ಕೊಟ್ಟಿದ್ದಾರೆ. ಗುಜರಾತ್​ನಲ್ಲಿ ಹುಟ್ಟಿರುವ ಎಲ್ಲರಿಗೂ ಈ ಉಚಿತ ಶಿಕ್ಷಣ ಲಭಿಸಲಿದೆ ಎಂದು ಹೇಳಿದ್ದಾರೆ.
ಮಾತ್ರವಲ್ಲ, ಈಗಿರುವ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳನ್ನು ಹೆಚ್ಚಿಸಿ ಉನ್ನತೀಕರಿಸುವ ಜತೆಗೆ ಹೊಸದಾಗಿ ಸುಸಜ್ಜಿತ ಶಾಲೆಗಳನ್ನು ದೊಡ್ಡಮಟ್ಟದಲ್ಲಿ ನಿರ್ಮಾಣ ಮಾಡಿಸಿ ಕೊಡಲಾಗುವುದು ಎಂದು ಕೂಡ ಅವರು ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲ, ಖಾಸಗಿ ಶಾಲೆಗಳ ಶುಲ್ಕವನ್ನು ಲೆಕ್ಕಪರಿಶೋಧನೆಗೆ ಒಳಪಡಿಸಿ, ಹೆಚ್ಚಿನ ಶುಲ್ಕವನ್ನು ಪಡೆದಿದ್ದರೆ ಅದನ್ನು ಪೋಷಕರಿಗೆ ವಾಪಸ್ ಕೊಡಿಸುವ ಕೆಲಸವನ್ನೂ ಗುಜರಾತ್​ನಲ್ಲಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರೋಗಿಯನ್ನು ಕರೆದುಕೊಂಡು ಆಸ್ಪತ್ರೆ ಗೇಟ್ ದಾಟುತ್ತಿದ್ದಂತೆ ಕೆಟ್ಟು ನಿಂತ ಆ್ಯಂಬುಲೆನ್ಸ್​!

ಭ್ರಷ್ಟ ರಾಜಕಾರಣಿಯತ್ತ ಶೂ ತೋರಿ ‘ಕಳ್ಳ ಕಳ್ಳ’ ಎಂದು ಕೂಗಿದ ಜನರು..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 5 =
Remember me
