ನವದೆಹಲಿ:ಅಬಕಾರಿ ನೀತಿಯಲ್ಲಿನ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ,ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ (ED) ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ರೋಸ್ ಅವೆನ್ಯೂ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ಅವರಿದ್ದ ಏಕಸದಸ್ಯ ಪೀಠವು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ₹10 ಸಾವಿರದ ಬಾಂಡ್‌ ಮತ್ತು ₹1 ಲಕ್ಷ ಶ್ಯೂರಿಟಿ ಆಧಾರದ ಮೇಲೆ ಅರವಿಂದ್​ ಕೇಜ್ರಿವಾಲ್​ಗೆ ಜಾಮೀನು ಮಂಜೂರು ಮಾಡಿದ್ದಾರೆ.
2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ಧೇಶನಾಲಯ ಅರವಿಂದ್​ ಕೇಜ್ರಿವಾಲ್​ಗೆ 8ಕ್ಕೂ ಹೆಚ್ಚು ಬಾರಿ ಸಮನ್ಸ್ ಜಾರಿ ಮಾಡಿದ್ದು, ಕೇಜ್ರಿವಾಲ್​ ವಿಚಾರಣೆಗೆ ಹಾಜರಾಗದೆ ಸಮನ್ಸ್‌ಗಳನ್ನು ಕೈಬಿಟ್ಟಿದ್ದರು. ಈ ಸಮನ್ಸ್‌ಗಳು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ. ಚುನಾವಣಾ ಪ್ರಚಾರಕ್ಕೆ ಹೋಗದಂತೆ ನನ್ನನ್ನು ತಡೆಯುವ ಉದ್ದೇಶದಿಂದ ಸಮನ್ಸ್ ನೀಡಲಾಗಿದೆ ಎಂದು ಕೇಜ್ರಿವಾಲ್​ ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
Rouse Avenue Court's ACMM Divya Malhotra grants bail to Delhi CM Arvind Kejriwal in both complaints filed by ED.https://t.co/LNXy0Uig0G
#WATCH| Delhi CM Arvind Kejriwal returns to his residence after a city court granted bail to him in ED summons casepic.twitter.com/YfTmqn8xtT
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + four =
Remember me
