ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಹಾಗೂ ಬಿಆರ್​ಎಸ್​ ನಾಯಕಿ ಕೆ.ಕವಿತಾ ಅವರು ಸದ್ಯಕ್ಕೆ ಜೈಲಿನಿಂದ ಹೊರಬರುವಂತೆ ಕಾಣಿಸುತ್ತಿಲ್ಲ. ದಿಲ್ಲಿಯ ರೂಸ್‌ ಅವೆನ್ಯೂ ನ್ಯಾಯಾಲಯ ಅವರಿಗೆ ಮೇ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಮೂಲಕ ಅವರ ಜೈಲು ವಾಸ ಮುಂದುವರಿದಿದೆ.
ಇದನ್ನೂ ಓದಿ:ಬಿಜೆಪಿಯ ಉಚ್ಚಾಟನೆಗೆ ಹೆದರುವುದಿಲ್ಲ, ಶಿವಮೊಗ್ಗದಲ್ಲಿ ಸ್ಪರ್ಧೆ ಖಚಿತ: ಈಶ್ವರಪ್ಪ
ಆಮ್ ಆದ್ಮಿ ಪಕ್ಷದ (ಎಎಪಿ) ಗೋವಾ ಚುನಾವಣೆಯ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯವು ಮೇ 7 ರವರೆಗೆ ವಿಸ್ತರಿಸಿದೆ. ನ್ಯಾಯಾಲಯವು ಅರವಿಂದ್​ ಕೇಜ್ರಿವಾಲ್ ಅವರನ್ನು ಏ.1 ರಿಂದ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಇದಾದ ಬಳಿಕ ನ್ಯಾಯಾಲಯ ಮತ್ತೊಮ್ಮೆ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿತ್ತು.
ಈ ಪ್ರಕರಣದಲ್ಲಿ ದೆಹಲಿ ಸಿಎಂ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಇದೀಗ ಮೇ 7ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಹಾಗೆಯೇ ತೆಲಂಗಾಣ ಮಾಜಿ ಸಿಎಂ, ಬಿಆರ್​ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನೂ ಕೂಡ ವಿಸ್ತರಿಸಲಾಗಿದೆ.
ಈ ಮೂವರೂ ಆರೋಪಿಗಳನ್ನು ವರ್ಚುವಲ್ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ತಮ್ಮ ವೈದ್ಯರೊಂದಿಗೆ ಪ್ರತಿದಿನ 15 ನಿಮಿಷಗಳ ವೈದ್ಯಕೀಯ ಸಮಾಲೋಚನೆಗೆ ಅವಕಾಶ ನೀಡುವಂತೆ ಕೋರಿ ಆಮ್ ಆದ್ಮಿ ಪಕ್ಷದ ಸಂಚಾಲಕನ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಲೋಕಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಮೋದಿ ಕೆಂಡಾಮಂಡಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + twenty =
Remember me
