ನವದೆಹಲಿ:ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಸೆರೆವಾಸ ಅನುಭವಿಸುತ್ತಿದ್ದ ದೆಹಲಿ ಸರ್ಕಾರದ ಮಾಜಿ ಸಚಿವ ಸತ್ಯೇಂದರ್​ ಜೈನ್ರನ್ನು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸುಮಾರು ಒಂದು ವರ್ಷದಿಂದ ತಿಹಾರ್​ ಜೈಲಿನಲ್ಲಿರುವ ಸತ್ಯೇಂದರ್​ ಜೈನ್​ ಇತ್ತೀಚಿಗೆ ಸ್ನಾನ ಮಾಡುವ ವೇಳೆ ಜಾರಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಟ್ವೀಟ್​ ಮಾಡಿರುವ ಅರವಿಂದ್​ ಕೇಜ್ರಿವಾಲ್​ ಧೈರ್ಯಶಾಲಿಯನ್ನು ಭೇಟಿ ಮಾಡಿದೆ ಎಂದು ಸತ್ಯೇಂದರ್​ ಜೈನ್​ ಜೊತೆ ಮಾತುಕತೆ ನಡೆಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
Met the brave man…..the hero..pic.twitter.com/d5gzKoDud9— Arvind Kejriwal (@ArvindKejriwal)May 28, 2023

Met the brave man…..the hero..pic.twitter.com/d5gzKoDud9
ಇದನ್ನೂ ಓದಿ:ಅನ್ಯಕೋಮಿನ ಯುವತಿ ಜೊತೆ ಚಾಟ್ಸ್​ ತಿಂದಿದ್ದಕ್ಕೆ ಹಲ್ಲೆ; ಆರೋಪಿಗಳು ಅರೆಸ್ಟ್​
ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಲೋಕನಾಯಕ ಆಸ್ಪತ್ರೆಗೆ ದಾಖಲಾಗಿರುವ ಸತ್ಯೇಂದರ್​ ಜೈನ್​ ಅವರಿಗೆ ಸುಪ್ರೀಂ ಕೋರ್ಟ್​ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.
ಎಎಪಿ ನಾಯಕನಿಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್​ ಮಾಧ್ಯಮಗಳ ಜೊತೆ ಮಾತನಾಡದಂತೆ ಮತ್ತು ದೆಹಲಿಯನ್ನು ತೊರೆಯಬಾರದು ಎಂದು ತಾಕೀತು ಮಾಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 1 =
Remember me
