ನವದೆಹಲಿ:ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಅರವಿಂದ ಕೇಜ್ರಿವಾಲ್ ಭಾನುವಾರ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಮಂತ್ರಣ ನೀಡಲಾಗಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಆದರೆ ಕಾರ್ಯಕ್ರಮಕ್ಕೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಆಮಂತ್ರಣ ನೀಡಲಾಗಿಲ್ಲ ಎಂದು ತಿಳಿದುಬಂದಿದೆ.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಕೇಜ್ರಿವಾಲ್ ಜತೆ ದೆಹಲಿಯ ವಿವಿಧ ವರ್ಗದ 50 ಜನಸಾಮಾನ್ಯರು ವೇದಿಕೆ ಹಂಚಿಕೊಳ್ಳಲಿದ್ದಾರೆ. ಶಾಲೆಗಳ ಪ್ಯೂನ್​ಗಳು, ಆಟೋ ಚಾಲಕರು, ಬಸ್ ನಿರ್ವಾಹಕರು, ಶಾಲಾ ಶಿಕ್ಷಕರು ಸೇರಿ 50 ಜನರಿಗೆ ಕೇಜ್ರಿವಾಲ್ ಜತೆ ವೇದಿಕೆಯಲ್ಲಿ ಸ್ಥಾನ ನೀಡಲಾಗುತ್ತದೆ. ಪ್ರಮಾಣವಚನ ಕಾರ್ಯಕ್ರಮ ಮುಗಿಯುತ್ತಲೇ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಸಲು ತಿರ್ಮಾನಿಸಲಾಗಿದೆ. ಈ ವೇಳೆ ದೇಶಾದ್ಯಂತ ಆಪ್ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸುವ ಬಗ್ಗೆ ರ್ಚಚಿಸಲಾಗುತ್ತದೆ ಎಂದು ಆಪ್ ನಾಯಕ ಗೋಪಾಲ್ ರಾಯ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 + eight =
Remember me
