ನವದೆಹಲಿ:ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಆಮ್​ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್​ ಅವರು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಅರವಿಂದ್ ಕೇಜ್ರೀವಾಲ್​ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇವರೊಟ್ಟಿಗೆ ಆಪ್​ನ ಸಚಿವರಾದ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್​, ಗೋಪಾಲ್​ ರೈ, ಕೈಲಾಶ್​ ಗೆಹ್ಲೋಟ್​, ಇಮ್ರಾನ್​ ಹುಸ್ಸೇನ್​, ರಾಜೇಂದ್ರ ಪಾಲ್​ ಗೌತಮ್​ ಅವರು ಪ್ರಮಾಣ ವಚನ ಸ್ವೀಕರಿಸಿದರು. ಲೆಫ್ಟಿನಂಟ್​ ಗವರ್ನರ್​ ಅನಿಲ್​ ಬೈಜಾಲ್​ ಅವರು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧನೆ ಮಾಡಿದರು.
ಸಮಾರಂಭದಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 70ರಲ್ಲಿ 62 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
