ನವದೆಹಲಿ:ಸಿಎಎ ಮತ್ತು ಎನ್​ಆರ್​ಸಿ ವಿರೋಧದ ಹೋರಾಟದಿಂದಾಗಿ ಯುದ್ಧ ಭೂಮಿಯಂತಾಗಿರುವ ದೆಹಲಿಗೆ ಸೇನೆಯನ್ನು ಕರೆಸಿ ಪರಿಸ್ಥಿತಿಯನ್ನು ನಿಯಂತ್ರಿಸಿ ಎಂದು ದೆಹಲಿಯ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಕೇಂದ್ರ ಗೃಹ ಸಚಿವ ಅಮಿತ್​ ಷಾರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸತತ ಮೂರು ದಿನಗಳಿಂದ ದೆಹಲಿಯಲ್ಲಿ ಹೋರಾಟವು ಹಿಂಸಾತ್ಮಕ ಹಾದಿಯಲ್ಲಿ ಸಾಗುತ್ತಿದ್ದು ಒಬ್ಬ ಪೊಲೀಸ್​ ಪೇದೆ ಸೇರಿದಂತೆ ಒಟ್ಟು 20 ಮಂದಿ ಸಾವನ್ನಪ್ಪಿದ್ದಾರೆ. 150ಕ್ಕೂ ಹೆಚ್ಚು ಜನರು ಗಾಯಾಳುಗಳಾಗಿದ್ದಾರೆ. ಹಾಗಾಗಿ ಗಲಭೆ ನಡೆಯುತ್ತಿರುವ ಪ್ರದೇಶಕ್ಕೆ ಸೇನೆಯನ್ನು ಕರೆತರಬೇಕು. ಆ ಮೂಲಕ ಜನರಲ್ಲಿ ಧೈರ್ಯ ತುಂಬಬೇಕು ಮತ್ತು ಇತರೆ ಪ್ರದೇಶಗಳಲ್ಲಿ ಕರ್ಫ್ಯೂ ಹಾಕಬೇಕು ಎಂದು ಕೇಜ್ರಿವಾಲ್​ ಟ್ವೀಟ್​ ಮೂಲಕ ಕೇಳಿಕೊಂಡಿದ್ದಾರೆ.
ಈ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರಿಗೆ ಪತ್ರವನ್ನು ಬರೆಯುವುದಾಗಿಯೂ ಸಹ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಪರಿಸ್ಥಿತಿ ತೀರಾ ಗಂಭೀರವಾದಾಗ ರಾಜ್ಯ ಪೊಲೀಸ್​ ಇಲಾಖೆಗೆ ಸೇನೆಯ ಸಹಾಯ ಅಗತ್ಯ ಎನಿಸಿದಾಗ ಮಾತ್ರ ಸೇನೆಯನ್ನು ಕರೆಸಿಕೊಳ್ಳಬಹುದಾಗಿದೆ. ದೆಹಲಿಯು ಕೇಂದ್ರಾಡಳಿತ ಪ್ರದೇಶವಾದ್ದರಿಂದ ಪೊಲೀಸ್​ ಇಲಾಖೆಯು ಕೇಂದ್ರದ ನಿರ್ವಹಣೆಯಲ್ಲಿದ್ದು ಸೇನೆಯನ್ನು ಕರೆಸಿಕೊಳ್ಳುವುದು ಕೇಂದ್ರದ ಕೈನಲ್ಲಿರುತ್ತದೆ.(ಏಜೆನ್ಸೀಸ್​)
I have been in touch wid large no of people whole nite. Situation alarming. Police, despite all its efforts, unable to control situation and instil confidence
Army shud be called in and curfew imposed in rest of affected areas immediately
Am writing to Hon’ble HM to this effect
— Arvind Kejriwal (@ArvindKejriwal)February 26, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 3 =
Remember me
