ನವದೆಹಲಿ:2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್​ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.
ಸುದ್ದಿ ಮೂಲಗಳ ಪ್ರಕಾರ ಭಾನುವಾರದಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್​ಗೆ ನೀಡಿರುವ ಸಮನ್ಸ್​ನಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.
ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಅವರನ್ನು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯವು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಇದನ್ನೂ ಓದಿ:ಪ್ರತಿಪಕ್ಷ ಕಾಂಗ್ರೆಸ್​​ನಲ್ಲಿ 60 ಕ್ಷೇತ್ರಕ್ಕೆ ಅಭ್ಯರ್ಥಿಗಳಿಲ್ಲ: ಸಿಎಂ ಬೊಮ್ಮಾಯಿ ಲೇವಡಿ
ಇನ್ನು ವಿಚಾರಣೆ ವೇಳೆ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಪಾತ್ರ ಇರುವ ಬಗ್ಗೆ ಸಾಕ್ಷ್ಯಾಧಾರಗಳು ದೊರೆತ್ತಿರುವ ಕಾರಣ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ಜಾರಿ ಮಾಡಲಾಗಿದೆ ಎಂದು ಉನ್ನತ ಸುದ್ದಿ ಮೂಲಗಳು ತಿಳಿಸಿವೆ.
ಇನ್ನು ಅರವಿಂದ್​ ಕೇಜ್ರಿವಾಲ್​ಗೆ ಸಿಬಿಐ ಸಮನ್ಸ್​ ಜಾರಿ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಎಎಪಿ ನಾಯಕ ಸಂಜಯ್​ ಸಿಂಗ್​ ದೆಹಲಿ ಸರ್ಕಾರ ಜಅರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಇದು ಕೇಂದ್ರ ಸರ್ಕಾರ ನಡೆಸುತ್ತಿರುವ ದ್ವೇಷ ರಾಜಕಾರಣದ ಫಲ.
ಈ ರೀತಿ ಆರೋಪ ಮಾಡುವುದು ಅಥವಾ ನಮ್ಮ ನಾಯಕರನ್ನು ಬಂಧಿಸುವುದರಿಂದ ಎಎಪಿ ಕಾರ್ಯಕರ್ತರು ಕುಗ್ಗುವುದಿಲ್ಲ. ಭ್ರಷ್ಟಾಚಾರದ ವಿರುದ್ಧದ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಸಂಜಯ್​ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 − five =
Remember me
