ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಮೂರನೇ ಬಾರಿಗೆ ಭರ್ಜರಿ ಜಯಭೇರಿ ಬಾರಿಸಿರುವ ಆಮ್​ ಆದ್ಮಿ ಪಕ್ಷವು ರಾಜಕೀಯದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದೆ. ಸತತ ಮೂರನೇ ಅವಧಿಗೆ ದೆಹಲಿ ಸಿಎಂ ಗಾದಿಗೆ ಏರಲು ಸಜ್ಜಾಗಿರುವ ಅರವಿಂದ್​ ಕೇಜ್ರಿವಾಲ್​ ಅವರು ಫೆ. 16ರ ಭಾನುವಾರದಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ದೆಹಲಿಯ ರಾಮ್​ಲೀಲಾ ಮೈದಾನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಅದ್ಧೂರಿ ಸಮಾರಂಭಕ್ಕೆ ವಿವಿಧ ನಾಯಕರುಗಳನ್ನು ಕೇಜ್ರಿವಾಲ್​ ಆಹ್ವಾನಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಬೆಳಗ್ಗೆ ಕೇಜ್ರಿವಾಲ್​ ಅವರು ಲೆಫ್ಟಿನೆಂಟ್​ ಗವರ್ನರ್​ ಅನಿಲ್​ ಬೈಜಲ್​ ಅವರನ್ನು ಭೇಟಿಯಾಗಿದ್ದಾರೆ. ಗವರ್ನರ್​ ನಿವಾಸದಲ್ಲಿ ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೀಕೆಂಡ್​ನಲ್ಲಿ ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆಪ್​ ಶಾಸಕರೊಂದಿಗೂ ಕೇಜ್ರಿವಾಲ್​ ಇಂದು ಸಭೆ ನಡೆಸಲಿದ್ದಾರೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಶಾಸಕರು ಆಪ್​ ಶಾಸಕಾಂಗ ಪಕ್ಷದ ನಾಯಕನಾಗಿ ಕೇಜ್ರಿವಾಲ್​ ಅವರನ್ನು ಇಂದು ಆಯ್ಕೆ ಮಾಡಲಿದ್ದಾರೆ.
ಪ್ರಮಾಣ ವಚನಕ್ಕೂ ಮುನ್ನ ಕೇಜ್ರಿವಾಲ್​ ಅವರು ನಿಗದಿತ ಪ್ರಕ್ರಿಯೆಯಂತೆ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಮೂರನೇ ಅವಧಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಲಿದ್ದಾರೆ.
ಅಂದಹಾಗೆ ಫೆ. 8ರಂದು ದೆಹಲಿಯ 70 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಮಂಗಳವಾರ(ಫೆ.11) ಪ್ರಕಟವಾದ ಫಲಿತಾಂಶದಲ್ಲಿ ಆಪ್​ 62 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ಮೂರನೇ ಅವಧಿಗೆ ದೆಹಲಿ ಗದ್ದುಗೆ ಏರಿದೆ. ಬಿಜೆಪಿ 8 ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿದ್ದು, ಕಾಂಗ್ರೆಸ್​ ಖಾತೆ ತೆರೆಯದೇ ಹೀನಾಯವಾಗಿ ಸೋತಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
