ನವದೆಹಲಿ:ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೊಸ್ ಅವೆನ್ಯೂ ನ್ಯಾಯಾಲಯವು ಜುಲೈ 3ರವರೆಗೆ ವಿಸ್ತರಿಸಿದೆ.
ಇದನ್ನು ಓದಿ:ಹಮಾರೆ ಬಾರಾಹ್ ಸಿನಿಮಾ ಬಿಡುಗಡೆಗೆ ಹೈಕೋರ್ಟ್​​ ಅಸ್ತು; ನ್ಯಾಯಾಲಯ ಸೂಚನೆ ಹೀಗಿದೆ
ನ್ಯಾಯಾಂಗ ಬಂಧನ ಮುಗಿದ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯವು ಸಿಎಂ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.
ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲು ಜಾರಿ ನಿರ್ದೇಶನಾಲಯವು (ಇಡಿ) ನ್ಯಾಯಾಲಯವನ್ನು ಮನವಿ ಮಾಡಿದೆ. 2022ರಲ್ಲಿ ರದ್ದುಗೊಳಿಸಲಾದ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತು ಹೆಚ್ಚಿನ ತನಿಖೆಗೆ ಇದು ಅತ್ಯಗತ್ಯ ಎಂದು ಪೀಠಕ್ಕೆ ತಿಳಿಸಿದೆ. ವಿಚಾರಣೆಯ ವೇಳೆ ಕೇಜ್ರಿವಾಲ್ ಪರ ವಾದ ಮಂಡಿಸಿದ ವಕೀಲರು ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಇಡಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿ, ಅವರ ಕಸ್ಟಡಿ ವಿಸ್ತರಣೆಯನ್ನು ಸಮರ್ಥಿಸುವ ಯಾವುದೇ ಆಧಾರಗಳಿಲ್ಲ ಎಂದು ಹೇಳಿದರು.
ಅಬಕಾರಿ ಪ್ರಕರಣದಲ್ಲಿ ಇಡಿ 2 ಗಂಟೆಗಳ ವಿಚಾರಣೆಯ ನಂತರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಬಂಧಿಸಿತ್ತು. ಅಂದಿನಿಂದ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಆದರೆ ಈ ನಡುವೆ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಮೂರು ವಾರಗಳ ಕಾಲ ಅಂದರೆ ಜೂನ್ 1ರವರೆಗೆ ಸುಪ್ರೀಂಕೋರ್ಟ್‌ನಿಂದ ತಾತ್ಕಾಲಿಕ ಜಾಮೀನು ಪಡೆದಿದ್ದ ಕೇಜ್ರಿವಾಲ್​​ ಮತದಾನ ಮುಗಿದ ನಂತರ ಜೂನ್ 2ರಂದು ತಿಹಾರ್​ ಜೈಲಿಗೆ ಶರಣಾದರು. (ಏಜೆನ್ಸೀಸ್​)
ಡೆಪ್ಯುಟಿ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಪವರ್​​​​ಸ್ಟಾರ್​​ ಟೇಬಲ್​​ ಮೇಲಿತ್ತು ಆ ಪುಸ್ತಕ; ಎಲ್ಲರ ಗಮನ ಅದರತ್ತ.. ಯಾವುದು ಆ ಪುಸ್ತಕ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 19 =
Remember me
