ನವದೆಹಲಿ:ಹಮಾಸ್ ಉಗ್ರರ ದಾಳಿಯಿಂದ ರಣಾಂಗಣವಾಗಿರುವ ಇಸ್ರೇಲ್​ನಲ್ಲಿ ಪರಿಸ್ಥಿತಿ ಭೀಕರವಾಗಿದ್ದು, ಭಾರತ ಸೇರಿದಂತೆ ಹಲವು ದೇಶಗಳು ಇಸ್ರೇಲ್​ಗೆ ಬೆಂಬಲ ಸೂಚಿಸಿ ಧೈರ್ಯ ನೀಡಿವೆ. ಇದೀಗ ಅಮೆರಿಕದಿಂದ ಮತ್ತೊಮ್ಮೆ ಇಸ್ರೇಲ್​ಗೆ ಅಭಯ ವ್ಯಕ್ತವಾಗಿದೆ.
ಯುಎಸ್ ಸೆಕ್ರೆಟರಿ ಆಫ್ ಸ್ಟೇಟ್ ಆ್ಯಂಟನಿ ಬ್ಲಿಂಕನ್ ಈ ಅಭಯವನ್ನು ವ್ಯಕ್ತಪಡಿಸಿದ್ದಾರೆ. ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಮ್ಮ ಬೆಂಬಲವನ್ನು ಘೋಷಿಸಿದ್ದಲ್ಲದೆ, 1,300ಕ್ಕೂ ಹೆಚ್ಚು ಇಸ್ರೇಲಿಗರ ಸಾವಿನ ನಡುವೆಯೂ ಇಸ್ರೇಲಿನ ಜನತೆಯ ಶೌರ್ಯವನ್ನು ಶ್ಲಾಘಿಸಿದರು.
ಇದನ್ನೂ ಓದಿ:ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯಭೂಮಿ ವಿವಾದ; ಇದೀಗ ಇನ್ನೊಂದು ಮಹತ್ವದ ಬೆಳವಣಿಗೆ
ನಿಮ್ಮನ್ನು ರಕ್ಷಿಸಿಕೊಳ್ಳಲು ನೀವು ಸಾಕಷ್ಟು ಬಲಶಾಲಿ ಆಗಿರಬಹುದು. ಆದರೆ ಅಮೆರಿಕ ಇರುವವರೆಗೆ ನೀವು ಎಂದಿಗೂ ಏಕಾಂಗಿಯಲ್ಲ. ಎಲ್ಲಿಯವರೆಗೆ ನಾವಿರುತ್ತೇವೋ ಅಲ್ಲಿಯವರೆಗೂ ನೀವು ಏಕಾಂಗಿಯಾಗಿ ಎದುರಿಸಬೇಕಾಗಿಲ್ಲ, ನಾವೂ ನಿಮ್ಮೊಂದಿಗೆ ಇರುತ್ತೇವೆ ಎಂದು ಹೇಳಿದರು.
ಹಮಾಸ್​ ದಾಳಿ: ಐವರು ಹಂತಕರನ್ನು ಸ್ವತಃ ಕೊಂದ ಎದೆಗಾತಿ; 20 ಉಗ್ರರ ಹತ್ಯೆಗೆ ನೇತೃತ್ವ ವಹಿಸಿದ ದಿಟ್ಟ ಯುವತಿ!

ಭಿಕ್ಷೆ ಬೇಡುತ್ತಿದ್ದ ವಿದೇಶಿ ಮಹಿಳೆಯ ಬದುಕು ಬದಲಿಸಿದ ಭಾರತೀಯ; ಯಾರೀಕೆ, ಈಗೇನು ಮಾಡುತ್ತಿದ್ದಾರೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 12 =
Remember me
