ಮುಂಬೈ:ಮಹಾರಾಷ್ಟ್ರದ ಥಾಣೆ ನಗರದ ಆಸ್ಪತ್ರೆಯಲ್ಲಿ 42 ವರ್ಷದ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಅಯೋಧ್ಯೆ ದೇವಸ್ಥಾನದಲ್ಲಿ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನದ ಮುಹೂರ್ತದಲ್ಲಿ ಹೆರಿಗೆ ಮಾಡಲು ವೈದ್ಯರಲ್ಲಿ ಮಾಡಿದ್ದರು.
ಇದನ್ನೂ ಓದಿ:ಶಿಕ್ಷಕನಿಗೆ ಕ್ಯಾನ್ಸರ್​ : 400 ವಿದ್ಯಾರ್ಥಿಗಳು ಮನೆಗೆ ಬಂದು ಏನ್ಮಾಡಿದರು ಗೊತ್ತಾ ?

ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಮಹಿಳೆ ಈ ಮೊದಲು ಹೆರಿಗೆ ದಿನಾಂಕವನ್ನು ಜನವರಿ 23ಕ್ಕೆ (ಮಂಗಳವಾರ) ಕ್ಕೆ ನೀಡಲಾಗಿತ್ತು. ಮಹಿಳೆಯ ಮನವಿ ಮೇರೆಗೆ ರಾಮನ ಪ್ರಾಣ ಪ್ರತಿಷ್ಠಾಪನೆಯ ಶುಭ ಮುಹೂರ್ತದಲ್ಲಿ ಒಂದು ದಿನ ಮೊದಲೇ ಹೆರಿಗೆ ಮಾಡಲಾಗಿದೆ ಎಂದು ಸಿಸೇರಿಯನ್ ಮಾಡಿದ ಆಸ್ಪತ್ರೆಯ ವೈದ್ಯ ಡಾ.ಚಂದ್ರಕಾಂತ್ ಬರೂರೆ ತಿಳಿಸಿದ್ದಾರೆ.
ಥಾಣೆಯ ನೌಪದಾ ನಿವಾಸಿಯಾಗಿರುವ ಸಮೃದ್ಧಿ ಬಾಮನೆ ಎಂಬ ಮಹಿಳೆ ಐವಿಎಫ್ ಚಿಕಿತ್ಸೆ ಮೂಲಕ ಗರ್ಭ ಧರಿಸಿದ್ದರು. ಮಧ್ಯಾಹ್ನ 12.30ರ ಸುಮಾರಿಗೆ ಗಂಡು ಮಗುವಿನ ಜನನವಾಗಿದ್ದು, ಮಗು ಮತ್ತು ತಾಯಿ ಇಬ್ಬರೂ ಕ್ಷೇಮವಾಗಿದ್ದಾರೆ ಎಂದು ವೈದ್ಯ ಡಾ.ಬರೂರೆ ಅವರು ತಿಳಿಸಿದರು.
ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆ ಸಮಯ ಹೊಂದಿಕೆಯಾಗುವಂತೆ ರಾಷ್ಟ್ರವ್ಯಾಪಿ ಅನೇಕರು ‘ಮುಹೂರ್ತದ ಹೆರಿಗೆ’ಯನ್ನು ಮಾಡಿಸಿಕೊಂಡಿದ್ದಾರೆ. ಹಲವು ಹೊಸ ದೇವಸ್ಥಾನಗಳ ಪ್ರತಿಷ್ಠಾಪನೆ ಕಾರ್ಯಕ್ರಮಗಳು ನಡೆದಿದೆ ಎನ್ನಲಾಗಿದೆ.
(ಏಜನ್ಸೀಸ್​)
ಶಿಕ್ಷಕನಿಗೆ ಕ್ಯಾನ್ಸರ್​ : 400 ವಿದ್ಯಾರ್ಥಿಗಳು ಮನೆಗೆ ಬಂದು ಏನ್ಮಾಡಿದರು ಗೊತ್ತಾ ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
