ಜೈಪುರ:ರಾಜಸ್ಥಾನ ಕಾಂಗ್ರೆಸ್​ನಲ್ಲಿ ದಿನದಿಂದ ಆಂತರಿಕ ಬಂಡಾಯ ಹೆಚ್ಚುತ್ತಿದ್ದು ತಮ್ಮದೇ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಸಚಿನ್​ ಪೈಲಟ್​ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಜೈಪುರದ ಶಹೀದ್​ ಸ್ಮಾರಕದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅವರು ತಮ್ಮ ಬದ್ಧ ವೈರಿ ಅಶೋಕ್​ ಗೆಹ್ಲೋಟ್​ ಅವರನ್ನು ಈ ಮೂಲಕ ಸಿಕ್ಕಿಹಾಕಿಸಿ ಹೈಕಮಾಂಡಿಗೆ ಸಂದೇಶ ರವಾನೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಇನ್ನು ರಾಜಸ್ಥಾನದ ಮಾಜಿ ಸಿಎಂ ಬಿಜೆಪಿ ನಾಯಕಿ ವಸುಂಧರಾ ರಾಜೆ ಮುಖ್ಯಮಂತ್ರಿ ಆಗಿದ್ದ ವೇಳೆ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಧು ಸಚಿನ್​ ಪೈಲಟ್​ ಆರೋಪಿಸಿದ್ದರು. ಈ ಕುರಿತು ತನಿಖೆಗೆ ಆದೇಶಿಸಬೇಕು ಎಂದು ಮುಖ್ಯಮಂತ್ರಿ ಗೆಹ್ಲೋಟ್​ ಮೇಲೆ ಒತ್ತಡ ಹೇರಿದ್ದರು.
ಇನ್ನು ಸಚಿನ್​ ಪೈಲಟ್​ ಮಾಡಿರುವ ಭ್ರಷ್ಟಾಚಾರ ಆರೋಪಗಳ ಕುರಿತು ಗೆಹ್ಲೋಟ್​ ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ ಮತ್ತು ತನಿಖೆಗೆ ಆದೇಶಿಸಲು ನಿರಾಸಕ್ತಿ ತೋರುತ್ತಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಅಂದುಕೊಂಡಿದ್ದನ್ನು ಮಾಡುತ್ತೇನೆ ಅಂತ ಬೆತ್ತಲೆ ಫೋಟೋ ಶೇರ್​ ಮಾಡಿದ ಜೇಮ್ಸ್​ ಬಾಂಡ್​ ನಟಿ!
ಇನ್ನು ಸಚಿನ್​ ಪೈಲಟ್​ ಉಪವಾಸ ಸತ್ಯಾಗ್ರಹ ಕುರಿತು ಪ್ರತಿಕ್ರಿಯಿಸಿರುವ ರಾಜಸ್ಥಾನ ಕಾಂಗ್ರೆಸ್​ ಉಸ್ತುವಾರಿ ಸುಖ್ಜಿಂದರ್​ ಸಿಂಗ್​ ರಾಂಧಾವ ಇದು ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿದ್ದು ಈ ರೀತಿಯ ವಿಚಾರಗಳನ್ನು ಪಕ್ಷದ ವೇದಿಕೆಗಳಲ್ಲಿ ಚರ್ಚಿಸಬೇಕು. ಇಂತಹ ವಿಚಾರವನ್ನು ಮಾಧ್ಯಮ ಹಾಗೂ ಸರ್ವಾಜನಿಕರ ಮುಂದೆ ಹೇಳುವುದು ಸರರಿಯಾದ ನಡೆಯಲ್ಲ.
ನಾನು ಕಳೆದ ಕೆಲ ತಿಂಗಳಿನಿಂದ ರಾಜಸ್ಥಾನ ಕಾಂಗ್ರೆಸ್​ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಈ ಬಗ್ಗೆ ಪೈಲಟ್​ ಅವರು ಎಂದಿಗೂ ನನ್ನ ಬಳಿ ಚರ್ಚಿಸಿಲ್ಲ. ಅವರು ಈಗಲೂ ಕೂಡ ನಮ್ಮ ಜೊತೆ ಚರ್ಚಿಸುವ ಬದಲು ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಂಡರೆ ಪಕ್ಷಕ್ಕೆ ಹೆಚ್ಚು ನಷ್ಟವಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಸಚಿನ್​ ಪೈಲಟ್​ ತಮ್ಮದೇ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡುತ್ತಿರುವುದು ಕಾಂಗ್ರೆಸ್​ ಪಕ್ಷವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದು ನಾಯಕತ್ವ ಬದಲಾವಣೆ ಕುರಿತು ವರಿಷ್ಠರಿಗೆ ಈ ಮೂಲಕ ಒತ್ತಡ ಹೇರಲು ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.
ವರ್ಷಾಂತ್ಯದಲ್ಲಿ ವಿಧಾನಸಭೆ ಚುಣಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಕಳೆದ ಕೆಲವು ವರ್ಷಗಳಿಂದ ನಾಯಕತ್ವ ಬದಲಾವಣೆ ಕೂಗು ಜೋರಾಗಿ ಕೇಳಿ ಬರುತ್ತಿದ್ದು ಕಾಂಗ್ರೆಸ್ ಪಕ್ಷ ಹೇಗೆ ಡ್ಯಾಮೇಜ್ ಕಲಂಟ್ರೋಲ್​ ಮಾಡಲಿದೆ ಎಂದು ಕಾದು ನೋಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
