ನವದೆಹಲಿ:ಕೋವಿಡ್​-19 ವಿರುದ್ಧದ ಹೋರಾಟದಲ್ಲಿ ಭಾರತ ಸಕ್ರಿಯವಾಗಿದ್ದು, ಲಸಿಕೆ ಉತ್ಪಾದನೆಯಲ್ಲಿ ವಿಶ್ವದ ಅತಿದೊಡ್ಡ ದೇಶಗಳ ಸಾಲಿನಲ್ಲಿ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು.
ಇಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಇಡೀ ಜಗತ್ತಿಗೆ ಪೂರೈಕೆ ಮಾಡುವಷ್ಟು ಕೊವಿಡ್​-19 ಲಸಿಕೆ ಉತ್ಪಾದನೆ ಮಾಡುವ ಸಾಮರ್ಥ್ಯ ಭಾರತಕ್ಕೆ ಇದೆ. ಇಡೀ ಮನುಕುಲವನ್ನು ಕರೊನಾದಿಂದ ಕಾಪಾಡುವ ನಿಟ್ಟಿನಲ್ಲಿ ನಮ್ಮ ದೇಶ ಹೋರಾಟ ನಡೆಸುತ್ತಿದೆ ಎಂದು ಮೋದಿ ಹೇಳಿದರು.ಇದನ್ನೂ ಓದಿ:ನಟ ಶರಣ್​ ಆಸ್ಪತ್ರೆಗೆ ದಾಖಲು, ಅಣ್ಣನ ಆರೋಗ್ಯದ ಬಗ್ಗೆ ತಂಗಿ ಶ್ರುತಿ ಹೇಳಿದ್ದೇನು?
ಭಾರತ ಯಾವಾಗಲೂ ಇಡೀ ಮನುಕುಲದ ಹಿತಾಸಕ್ತಿಯ ಬಗ್ಗೆ ಯೋಚಿಸುತ್ತದೆ. ಜನರ ಒಳಿತಿನ ತತ್ವಗಳನ್ನು ಆಧರಿಸಿಯೇ ನಾವು ನೀತಿ ರೂಪಿಸುತ್ತೇವೆ ಹೊರತು ಪಟ್ಟಭದ್ರ ಹಿತಾಸಕ್ತಿಗಳಿಗಾಗಿ ಅಲ್ಲ. ಈ ಸಾಂಕ್ರಾಮಿಕ ಸಂದರ್ಭದಲ್ಲಿ ನಾವು 150ಕ್ಕೂ ಹೆಚ್ಚು ದೇಶಗಳಿಗೆ ಅಗತ್ಯ ಔಷಧಿಗಳನ್ನು ಕಳಿಸಿದ್ದೇವೆ ಎಂದು ತಿಳಿಸಿದರು.ಕರೊನಾ ಕಾರಣದಿಂದ ಈ ಬಾರಿ ವಿಶ್ವ ಸಂಸ್ಥೆ ಸಾಮಾನ್ಯ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಿತು. ಇದರಲ್ಲಿ ಮಾತನಾಡಿದ ಮೋದಿಯವರು ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಇನ್ನಷ್ಟು ಹೆಚ್ಚಿನ ಮಹತ್ವ ಸಿಗಬೇಕು ಎಂದು ಒತ್ತಾಯಿಸಿದರು.(ಏಜೆನ್ಸೀಸ್​)
ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಸಿಗಲಿ ಇನ್ನಷ್ಟು ಮಹತ್ವ: ಪ್ರಧಾನಿ ಮೋದಿ ಒತ್ತಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 13 =
Remember me
