ಹೈದರಾಬಾದ್:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಶನಿವಾರ ಸುಪ್ರೀಂ ಕೋರ್ಟ್‌ ಅರ್ಜಿ ಸಲ್ಲಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
ಇದನ್ನೂ ಓದಿ:ಹಸೆಮಣೆ ಏರಿದ ವಿಕ್ಟರಿ ವೆಂಕಟೇಶ್ ಪುತ್ರಿ .. ಬಂದ ಹೀರೋಗಳು ಯಾರು ಗೊತ್ತಾ?
ಮುಸ್ಲಿಂ ಸಮುದಾಯದ ಸಾಕಷ್ಟು ವಿರೋಧದಿಂದ ಕಳೆದ ನಾಲ್ಕೈದು ವರ್ಷಗಳಿಂದ ಜಾರಿಯಾಗದೆ ಬಾಕಿ ಉಳಿದಿದ್ದ ಈ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡುವ ಮೂಲಕ ಲೋಕಸಭೆ ಚುನಾವಣೆಯ ಪ್ರಮುಖ ಅಸ್ತ್ರವಾಗಿಸಿಕೊಂಡಿದೆ ಎಂದು ಆರೋಪಿಸಲಾಗಿದೆ.
AIMIM president Asaduddin Owaisi approaches the Supreme Court seeking to stay the implementation of the Citizenship Amendment Act (CAA), 2019 and the Rules, 2024.
Owaisi says no applications seeking grant of citizenship status be entertained or processed by the government under…pic.twitter.com/w8uQii4lyn
— ANI (@ANI)March 16, 2024

ಪೌರತ್ವ (ತಿದ್ದುಪಡಿ) ಸ್ಥಿತಿಯನ್ನು ನಿಯಮಗಳು-2024 ಹೆಸರಿನ ಈನಿಯಮಗಳು, ಸಿಎಎ-2019 ಕಾಯ್ದೆಯ ಪ್ರಕಾರ ಅರ್ಹರಾದವರಿಗೆ ಭಾರತೀಯ ಪೌರತ್ವ ನೀಡಲು ಅವಕಾಶ ಕಲ್ಲಿಸಲಿವೆ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರೊಬ್ಬರು ತಿಳಿಸಿದರು.
ಏನಿದು ಸಿಎಎ?:ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ವಿದೇಶಿ ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ನೀಡಲು ಈ ಕಾಯ್ದೆ ಅವಕಾಶ ಮಾಡಿಕೊಡುತ್ತದೆ. ಭಾರತದ ನೆರೆ ರಾಷ್ಟ್ರಗಳಾದ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿರುವ ಮುಸ್ಲಿಮೇತರರಿಗೆ ಧರ್ಮದ ಆಧಾರದಲ್ಲಿ ಪೌರತ್ವ ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೂ ಮುನ್ನ ಈ ಮೂರು ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿರುವ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರೈಸ್ತ ಧರ್ಮೀಯರಿಗೆ ಮಾತ್ರ ಇದರ ಅನುಕೂಲ ದೊರೆಯಲಿದೆ.
ಜತೆಗೆ ಅಕ್ರಮ ವಲಸಿಗರ ವಿರುದ್ಧ ದಾಖಲಾಗಿರುವ ಪ್ರಕರಣಗಳು ರದ್ದಾಗುತ್ತವೆ. ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ತಕ್ಷಣವೇ ಈ ಜನರಿಗೆ ಭಾರತದ ಪ್ರಜೆಗೆ ದೊರೆಯುವ ಎಲ್ಲಾ ಹಕ್ಕುಗಳು ಮತ್ತು ಸವಲತ್ತುಗಳು ಕೂಡ ದೊರೆಯುತ್ತವೆ. ಅಸ್ಸಾಂ ಎನ್‌ಆರ್‌ಸಿಯಿಂದ ಹೊರಗೆ ಇಡಲಾದ ಹಿಂದೂಗಳು, ಬೌದ್ಧ, ಕ್ರೈಸ್ತ, ಜೈನ ಧರ್ಮೀಯರಿಗೆ ಕೂಡ ಪೌರತ್ವ ದೊರೆಯಲಿದೆ. ಆದರೆ, ಈ ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿರುವ ಮುಸ್ಲಿಮರಿಗೆ ಭಾರತದ ಪೌರತ್ವ ದೊರೆಯುವುದಿಲ್ಲ.
ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ! ಬಿಎಸ್​ವೈ ವಿರುದ್ಧ ವಾಗ್ದಾಳಿ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:2 + 8 =
Remember me
