ದೆಹಲಿ:ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್​ ವಿವಾದ ರಾಷ್ಟ್ರ-ಅಂತರಾಷ್ಟ್ರಮಟ್ಟದಲ್ಲೂ ಚರ್ಚೆಯಾಗುತ್ತಿದೆ. ಹಿಜಾಬ್​ ಪರವಾಗಿ, ಹಿಜಾಬ್​ ವಿರೋಧಿಸಿ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳಯ ಬೀದಿಗಿಳಿದ ಪ್ರತಿಭಟನೆ ನಡೆಸಿವೆ. ಬೂದಿ ಮುಚ್ಚಿದ ಕೆಂಡದಂತಿದೆ. ಇದೀಗ ‘ಹಿಜಾಬಿಯೊಬ್ಬರು ಮುಂದೊಂದು ದಿನ ಈ ದೇಶದ ಪ್ರಧಾನಮಂತ್ರಿಯೂ ಆಗುತ್ತಾರೆ’ ಎಐಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದು, ವಿಡಿಯೋ ವೈರಲ್​ ಆಗಿದೆ.
ಎಐಎಂಐಎಂ(ಆಲ್​ ಇಂಡಿಯಾ ಮಜ್ಲಿಸ್​ ಇ ಇತ್ತೆಹದುಲ್​ ಮುಸ್ಲಿಮೀನ್​) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಉತ್ತರ ಪ್ರದೇಶ ಚುನಾವಣಾ ಪ್ರಚಾರದಲ್ಲಿ ಮಾತನಾಡುತ್ತಾ, ಒಂದಲ್ಲ ಒಂದು ದಿನ ಹಿಜಾಬಿಯೇ ಭಾರತದ ಪ್ರಧಾನಿಯಾಗುತ್ತಾಳೆ ಎಂದಿದ್ದಾರೆ.
‘ಹಿಜಾಬ್ ಧರಿಸುವ ಹೆಣ್ಣುಮಕ್ಕಳು ಜಿಲ್ಲಾಧಿಕಾರಿ ಆಗಬಹುದು, ವೈದ್ಯರಾಗಬಹುದು, ದೊಡ್ಡ ಉದ್ಯಮಿ ಆಗ್ಬಹುದು, ಅಷ್ಟೇ ಏಕೆ? ಮುಂದೊಂದು ದಿನ ಈ ದೇಶದ ಪ್ರಧಾನಮಂತ್ರಿಯೂ ಆಗುತ್ತಾರೆ’ ಎಂದು ಓವೈಸಿ ಹೇಳಿದ್ದು, ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಾಕಿಕೊಂಡಿದ್ದಾರೆ.
इंशा’अल्लाहpic.twitter.com/lqtDnReXBm
— Asaduddin Owaisi (@asadowaisi)February 12, 2022

ಇದಕ್ಕೂ ಮುನ್ನ ಮಂಡ್ಯದ ಪಿಇಎಸ್​ ಕಾಲೇಜಿನಲ್ಲಿ ಜೈಶ್ರೀರಾಮ್​ ಘೋಷಣೆಗೆ ಪ್ರತಿಯಾಗಿ ಅಲ್ಲಾಹು ಅಕ್ಬರ್​ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್​ ಅವರನ್ನ ಪ್ರಶಂಸಿಸಿದ್ದರು. ಹಿಜಾಬ್ ಮುಸ್ಲಿಂ ಹೆಣ್ಣುಮಕ್ಕಳ ಹಕ್ಕು. ಹಿಜಾಬ್​ ಹಕ್ಕು ಪ್ರತಿಪಾದಿಸುತ್ತಿರುವ ಕರ್ನಾಟಕದ ಹೆಣ್ಣುಮಕ್ಕಳಿಗೆ ನನ್ನ ಸಲಾಂ ಎಂದಿದ್ದರು.
ಮಧ್ಯಂತರ ಆದೇಶ ಪ್ರಕಟಿಸಿದ ಹೈಕೋರ್ಟ್‌ ಪೂರ್ಣಪೀಠ: ತರಗತಿಯೊಳಗೆ ಹಿಜಾಬ್​, ಕೇಸರಿ ಶಾಲಿಗೆ ನಿರ್ಬಂಧ

ನಗ್ನಚಿತ್ರ ನೋಡುವ ಗೀಳು… ಪ್ರೇಯಸಿಯ ತಾಯಿ ಮೊಬೈಲ್​ಗೆ ವಿಡಿಯೋ ಕಳಿಸಿ ಆತ ಕೊಟ್ಟ ಕಾಟ ಅಷ್ಟಿಷ್ಟಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + one =
Remember me
