ಹೈದರಾಬಾದ್:ಸುಮನ್ನೇ ನೀವು ನನ್ನ ಬಗ್ಗೆ ಮಾತನಾಡುವ ಬದಲು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಯನಾಡ್​ ಬದಲು ಹೈದರಾಬಾದಿನಲ್ಲಿ ನನ್ನ ವಿರುದ್ಧ ಸ್ಪರ್ಧಿಸಿ ಗೆದ್ದು ತೋರಿಸಿ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ, ಸಂಸದ ಅಸಾದುದ್ದೀನ್​ ಓವೈಸಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಸವಾಲೆಸೆದಿದ್ದಾರೆ.
ಹೈದಾರಾಬಾದಿನಲ್ಲಿ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಓವೈಸಿ ಕಾಂಗ್ರೆಸ್​ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಬಾಬ್ರಿ ಮಸೀದಿಯ ವಿಚಾರವನ್ನು ಸಹ ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದಾರೆ.
ಇದನ್ನೂ ಓದಿ:ನಿಂತಿದ್ದ ಲಾರಿಗೆ ಬಸ್ ಡಿಕ್ಕಿ​; ಮೋದಿ ಸಮಾವೇಶಕ್ಕೆ ತೆರಳುತ್ತಿದ್ದ 39ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯ
ನಾನು ರಾಹುಲ್​ ಗಾಂಧಿಗೆ ನೇರ ಸವಾಲು ಹಾಕುತ್ತಿದ್ದೇನೆ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ನೀವು ವಯನಾಡಿನ ಬದಲು ಹೈದರಾಬಾದಿನಲ್ಲಿ ನನ್ನ ವಿರುದ್ಧ ಸ್ಪರ್ಧಿಸಿ. ನೀವು ದೊಡ್ಡ ದೊಡ್ಡ ಮಾತುಗಳನ್ನು ಆಡುವ ಬದಲು ಚುನಾವಣಾ ಆಖಾಡದಲ್ಲಿ ನನ್ನನ್ನು ಎದುರಿಸಿ. ನಿಮ್ಮ ಸವಾಲುಗಳನ್ನು ಸ್ವೀಕರಿಸಲು ನಾನು ಸಿದ್ದನಿದ್ದೇನೆ. ಕಾಂಗ್ರೆಸ್​ ಆಡಳಿತಾವಧಿಯಲ್ಲೇ ಅಯೋಧ್ಯೆಯಲ್ಲಿ ಬಾಬ್ರಿ ಹಾಗೂ ಸೆಕ್ರಟೆರಿಯೇಟ್ ಮಸೀದಿಯನ್ನು ಹೊಡೆದು ಹಾಕಲಾಗಿತ್ತು ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ, ಸಂಸದ ಅಸಾದುದ್ದೀನ್​ ಓವೈಸಿ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದಾರೆ.
ಸೆಪ್ಟೆಂಬರ್ 17ರಂದು ತೆಲಂಗಾಣದ ಟುಕ್ಕುಗುಡ್ಡದಲ್ಲಿ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ರಾಹುಲ್​ ಗಾಂಧಿ ಬಿಆರ್​ಎಸ್​, ಬಿಜೆಪಿ ಹಾಗೂ ಎಐಎಂಎಐಎಂ ಪಕ್ಷಗಳು ಒಂದೇ ಗೂಡಿನ ಹಕ್ಕಿಗಳೆಂದು ಆರೋಪಿಸಿದ್ದರು. ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಹಾಗೂ ಸಂಸದ ಅಸಾದುದ್ದೀನ್​ ಓವೈಸಿ ವಿರುದ್ಧ ಇದುವರೆಗೂ ಯಾವುದೇ ಇಡಿ ಹಾಗೂ ಐಟಿ ಪ್ರಕರಣ ದಾಖಲಾಗಿಲ್ಲ. ಯಾಕೆಂದರೆ ಅವರು ಪ್ರಧಾನಿ ಮೋದಿಗೆ ಅತ್ಯಾಪ್ತರು ಎಂದು ರಾಹುಲ್​ ಗಾಂಧಿ ಆರೋಪಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 10 =
Remember me
