ಬೆಳಗಾವಿ:ಕರ್ನಾಟಕದಲ್ಲಿ ಕಾಂಗ್ರೆಸ್‌‌ಗೆ ತನ್ನದೇ ಆದ ವೋಟ್ ಬ್ಯಾಂಕ್ ಇದೆ. ಕಾಂಗ್ರೆಸ್ ವಿಚಾರಧಾರೆ ಒಪ್ಪುವ ಜನ ಕರ್ನಾಟಕದಲ್ಲಿದ್ದಾರೆ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚವ್ಹಾಣ್ ಹೇಳಿದ್ದಾರೆ.
ಬೆಳಗಾವಿ ಕಾಂಗ್ರೆಸ್‌ ಭವನದಲ್ಲಿ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚವ್ಹಾಣ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 6ರವರೆಗೆ ನಾನು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದೇನೆ. ನನಗೆ ಎಐಸಿಸಿ ಸ್ಟಾರ್ ಕ್ಯಾಂಪೇನರ್ ಜವಾಬ್ದಾರಿ ನೀಡಿದೆ. ನಿನ್ನೆ ಚಿಕ್ಕೋಡಿ ಭಾಗದಲ್ಲಿ ಪ್ರಚಾರ ಮಾಡಿದ್ದು ಕಾಂಗ್ರೆಸ್‌ ಪರ ಉತ್ತಮ ವಾತಾವರಣ ಇದೆ. ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾಳೆ ಖಾನಾಪುರದಲ್ಲಿ ಪ್ರಚಾರ ಮಾಡಲಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ: ಬಿಜೆಪಿ ಬಿಟ್ಟ ಬೆನ್ನಲ್ಲೇ ಮತ್ತೊಂದು ದೃಢ ನಿರ್ಧಾರ ತೆಗೆದುಕೊಂಡ ಮಾಜಿ ಸಿಎಂ ಜಗದೀಶ್​ ಶೆಟ್ಟರ್​!
ನಾಡಿದ್ದು ಔರಾದ್‌ಗೆ ತೆರಳಿ ಪ್ರಚಾರ ಮಾಡಲಿದ್ದೇನೆ. ಕಳೆದ ಐದು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶೇಕಡಾವಾರು ಹೆಚ್ಚಿನ ಮತ ಬಂದಿವೆ. ಕರ್ನಾಟಕದಲ್ಲಿ ಕಾಂಗ್ರೆಸ್‌‌ಗೆ ತನ್ನದೇ ಆದ ವೋಟ್ ಬ್ಯಾಂಕ್ ಇದೆ. ಕಾಂಗ್ರೆಸ್ ವಿಚಾರಧಾರೆ ಒಪ್ಪುವ ಜನ ಕರ್ನಾಟಕದಲ್ಲಿದ್ದಾರೆಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದ ಸರ್ಕಾರ ರಚಿಸುತ್ತದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆ ಈಗಾಗಲೇ ಪ್ರಕಟಿಸಿದೆ. ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ವಿವರಣೆ ನೀಡಿದ ಅಶೋಕ್ ಚೌಹಾನ್ ಅವರು ಬಿಜೆಪಿ ಅಭಿವೃದ್ಧಿ ವಿಷಯ ಮೇಲೆ ಮತಯಾಚಿಸುವ ಬದಲು ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ತಮ್ಮ ವಿಫಲತೆಯನ್ನು ಬಿಜೆಪಿ ಪರೋಕ್ಷವಾಗಿ ತೋರಿಸುತ್ತಿದೆ. ಬಿಜೆಪಿ ವಿರುದ್ಧ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚೌಹಾನ್ ವಾಗ್ದಾಳಿ ಮಾಡಿದ್ದಾರೆ.
ಕಾರ್​​, ಟ್ರಕ್​ ಮುಖಾಮುಖಿ ಡಿಕ್ಕಿ; ಮದುವೆಗೆ ಹೋಗುತ್ತಿದ್ದ 11 ಮಂದಿ ಮೃತ್ಯು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 8 =
Remember me
