ಜೈಪುರ:ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹಲೋಟ್​ ಅವರ ಪುತ್ರ ವೈಭವ್​ ಗೆಹ್ಲೋಟ್​ಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ED) ನೋಟಿಸ್​ ಜಾರಿ ಮಾಡಿದೆ.
ವಿದೇಶಿ ವಿನಿಮಯ ಕಾಯ್ದೆ (FEMA), 1999ರ ಅನ್ವಯ ಅಕ್ಟೋಬರ್​ 27ರಂದು ಜೈಪುರ ಅಥವಾ ನವದೆಹಲಿಯಲ್ಲಿ ವಿಚಾರಣೆಗೆ ಹಾಜರಗುವಂತೆ ವೈಭವ್​ ಗೆಹ್ಲೋಟ್​ಗೆ ನೋಟಿಸ್​ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ (ED) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚಿಗೆ ರಾಜಸ್ಥಾನ ಮೂಲದ ಹಾಸ್ಪಿಟಾಲಿಟಿ ಗ್ರೂಪ್ ಟ್ರಿಟಾನ್ ಹೋಟೆಲ್ಸ್ & ರೆಸಾರ್ಟ್ಸ್ ಪ್ರೈವೇಟ್ ಲಿಮಿಟೆಡ್ ಮೇಲೆ ನಡೆದ ED ದಾಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ವೈಭವ್​ ಗೆಹ್ಲೋಟ್​ಗೆ ನೋಟಿಸ್ ಜಾರಿ ಮಾಡಲಾಗಿದೆ.
दिनांक 25/10/23राजस्थान की महिलाओं के लिए कांग्रेस की गारंटियाँ लॉंचदिनांक 26/10/23-राजस्थान कांग्रेस अध्यक्ष गोविन्द सिंह जी डोटासरा के यहाँ ED की रेड– मेरे बेटे वैभव गहलोत को ED में हाज़िर होने का समनअब आप समझ सकते हैं, जो मैं कहता आ रहा हूँ कि राजस्थान के अंदर ED की…pic.twitter.com/6hUbmCHCW1
ಇದನ್ನೂ ಓದಿ:ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ; ಮಗು ಸೇರಿದಂತೆ 12 ಮಂದಿ ಮೃತ್ಯು
ಚುನಾವಣೆಯ ಹೊಸ್ತಿಲಲ್ಲಿ ಕೆಂದ್ರದಲ್ಲಿರುವ ಬಿಜೆಪಿ ಸರ್ಕಾರ ಈ ರೀತಿ ದಾಳಿ ಮಾಡಿಸುವ ಮೂಲಕ ನಮ್ಮ ಧ್ವನಿಯನ್ನು ಹತ್ತಿಕ್ಕಲು ನೋಡುತ್ತಿದೆ. ನಿನ್ನೆ ಕಾಂಗ್ರೆಸ್​ ಭರವಸೆ ನೀಡಿದೆವು ಇಂದು ರಾಜ್ಯ ಘಟಕದ ಅಧ್ಯಕ್ಷರ ಮನೆ ಮೇಲೆ ದಾಳಿ ಮಾಡಲಾಗಿದೆ. ನಾಳೆ ನನ್ನ ಮಗನಿಗೆ ವಿಚಾರಣೆಗೆ ಹಾಜರಗುವಂತೆ ನೋಟಿಸ್ ನೀಡಲಾಗಿದೆ. ರಾಜಸ್ಥಾನದಲ್ಲಿ ನಾವು ಮತ್ತೊಮ್ಮೆ ಗೆಲ್ಲುತ್ತೇವೆ ಎಂದು ಅರಿತಿರುವ ಬಿಜೆಪಿ ಜನರ ಮನಸ್ಸನ್ನು ಗೆಲ್ಲಲಾಗದೆ ಈ ರೀತಿ ಮಾಡುತ್ತಿದೆ ಎಂದು ಸಿಎಂ ಅಶೋಕ್​ ಗೆಹ್ಲೋಟ್​ ಕಿಡಿಕಾರಿದ್ದಾರೆ.
ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 7 =
Remember me
