ಮುಜಫರ್​ನಗರ:ಪುಟ್ಟ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಉತ್ತರ ಪ್ರದೇಶದ ಶುಕರ್ತಾಲ್‌ನ ಆಶ್ರಮವೊಂದರ ಮಾಲೀಕ ಸ್ವಾಮಿ ಭಕ್ತಿ ಭೂಷಣ್ ಗೋವಿಂದ್ ಮಹಾರಾಜ್​ನನ್ನು ಪೊಲೀಸರು ಬಂಧಿಸಿದ್ದಾರೆ.
ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಕಾರ್ಮಿಕರಾಗಿ ಕೆಲಸ ಮಾಡುವಂತೆ ಒತ್ತಡ ಹೇರಿದ್ದ ಭೂಷಣ್​ನನ್ನು ಬಂಧಿಸಿರುವ ಪೊಲೀಸರು, ಸಂತ್ರಸ್ತ 10 ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಮಂಡಳಿ ಮುಂದೆ ಹಾಜರು ಪಡಿಸಿದ್ದಾರೆ. ಈ ಪೈಕಿ ನಾಲ್ಕು ಮಕ್ಕಳು ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ.ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಆಶ್ರಮದಿಂದಲೇ ಪರಾರಿಯಾಗಲು ಯತ್ನಿಸಿದ ಆರೋಪಿ ಸ್ವಾಮಿ ಭಕ್ತಿ ಭೂಷಣ್ ಗೋವಿಂದ್ ಮಹಾರಾಜ್​ನನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿರಿಸಿಎಂ ಕಚೇರಿ-ನಿವಾಸದಲ್ಲಿ 7 ಮಂದಿಗೆ ಕರೊನಾ ಸೋಂಕು, ಹೋಂ ಕ್ವಾರಂಟೈನ್​ನಲ್ಲಿ ಯಡಿಯೂರಪ್ಪ
ಜುಲೈ 7ರಂದು ಶಿಶುಪಾಲನಾ ಸಹಾಯವಾಣಿ ಮತ್ತು ಪೊಲೀಸರ ತಂಡವು ಆಶ್ರಮದಲ್ಲಿದ್ದ ಎಂಟು ಮಕ್ಕಳನ್ನು ರಕ್ಷಿಸಿತ್ತು. ಬಳಿಕ ಇನ್ನಿಬ್ಬರು ಮಕ್ಕಳನ್ನು ರಕ್ಷಿಸಿದೆ. 7ರಿಂದ 10ವರ್ಷದೊಳಗಿನ ಈ ಮಕ್ಕಳು ತ್ರಿಪುರ, ಮಿಜೋರಾಂ ಮತ್ತು ಅಸ್ಸಾಂ ಮೂಲದವರು.
ಶುಕರ್ತಾಲ್‌ನಲ್ಲಿ 2008ರಲ್ಲಿ ಆಶ್ರಮ ಸ್ಥಾಪಿಸಿದ್ದ ಭೂಷಣ್, ಅತ್ಯಾಚಾರ ಆರೋಪವನ್ನು ಅಲ್ಲಗೆಳೆದಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ನಾಲ್ಕು ಮಕ್ಕಳು ಲೈಂಗಿಕ ಕಿರುಕುಳಕ್ಕೆ ಒಳಪಟ್ಟಿರುವುದು ದೃಢಪಟ್ಟಿದೆ.
ಐಪಿಸಿ ಸೆಕ್ಷನ್ 323 (ಉದ್ದೇಶಪೂರ್ವಕವಾಗಿ ನೋವುಂಟು ಮಾಡುವುದು), 377 (ಅಸ್ವಾಭಾವಿಕ ಅಪರಾಧ) ಮತ್ತು ಪೋಕ್ಸೋ ಕಾಯ್ದೆ ಅಡಿಯಲ್ಲಿ ಸ್ವಾಮಿ ಭಕ್ತಿ ಭೂಷಣ್ ಗೋವಿಂದ್ ಮಹಾರಾಜ್​ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಡಿಪ್ಲೊಮಾ, ಇಂಜಿನಿಯರಿಂಗ್​, ಪದವಿ, ಸ್ನಾತಕೋತ್ತರ ಪರೀಕ್ಷೆ ರದ್ದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + two =
Remember me
