ನವದೆಹಲಿ:ನೂಪುರ್​ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಟೈಲರ್ ಕನ್ಹಯ್ಯ ಲಾಲ್​ನನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜಸ್ಥಾನ ಪೊಲೀಸರು ಮತ್ತೊಂದು ಮಹತ್ವದ ಕ್ರಮಕೈಗೊಂಡಿದ್ದಾರೆ.
ಕೊಲೆಡುಕರಿಗೆ ಭಯೋತ್ಪಾದಕ ಸಂಘಟನೆಯ ಸಂಪರ್ಕ ಇರುವುದರಿಂದ ರುಂಡ ಬೇರ್ಪಡಿಸಿ ಹತ್ಯೆ ಮಾಡಿದ್ದನ್ನೂ ಭಯೋತ್ಪಾದನೆ ಎಂದೇ ಪರಿಗಣಿಸಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ದ್ರೌಪದಿಗೆ ದಳಪತಿಗಳ ಬೆಂಬಲ; ಇಂಗಿತ ವ್ಯಕ್ತಪಡಿಸಿದ ಎಚ್​ಡಿಕೆ
ಅಷ್ಟೇ ಅಲ್ಲದೆ ಪರಾರಿಯಾಗುತ್ತಿದ್ದ ಆರೋಪಿಗಳನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ಬಂಧಿಸಿದ ಪೊಲೀಸರಿಗೆ ಬಡ್ತಿ ನೀಡಲು ರಾಜಸ್ಥಾನ ಸರ್ಕಾರ ನಿರ್ಧರಿಸಿದೆ. ಜೀವದ ಹಂಗುತೊರೆದು ಇಬ್ಬರು ಪಾತಕಿಗಳನ್ನು ಹಿಡಿದ ತೇಜ್‌ಪಾಲ್, ನರೇಂದ್ರ, ಶೌಕತ್, ವಿಕಾಸ್ ಮತ್ತು ಗೌತಮ್ ಎಂಬ ಐವರು ಪೊಲೀಸರಿಗೆ ಬಡ್ತಿ ನೀಡಲಾಗುವುದು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಇದನ್ನೂ ಓದಿ:ಆಸ್ಪತ್ರೆಗೆ ಹೊಕ್ಕು 2 ದಿನದ ಹಸುಳೆಯನ್ನು ಕಚ್ಚಿಕೊಂಡು ಹೋದ ಬೀದಿನಾಯಿ, ಮಗು ಸಾವು..
ಇದರ ಬೆನ್ನಿಗೇ ರಾಜಸ್ಥಾನ ಪೊಲೀಸರಿಂದ ಮತ್ತೊಂದು ಮಹತ್ವದ ಕ್ರಮ ಜರುಗಿದೆ. ಅದೇನೆಂದರೆ ಉದಯಪುರದಲ್ಲಿನ ಟೈಲರ್ ಕನ್ಹಯ್ಯ ಲಾಲ್ ಸಾವಿಗೂ ಮುನ್ನ ಉಂಟಾಗಿದ್ದ ಪ್ರಕ್ಷುಬ್ಧ ಪರಿಸ್ಥಿತಿ ಹತೋಟಿಗೆ ತರುವಲ್ಲಿ ಪೊಲೀಸರು ಸೂಕ್ತ ಕ್ರಮಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಠಾಣೆಯ ಎಎಸ್​ಐ ಹಾಗೂ ಎಸ್​ಎಚ್​ಒಗಳನ್ನು ಅಮಾನತುಗೊಳಿಸಲಾಗಿದೆ ಎಂದು ರಾಜಸ್ಥಾನ ಡಿಜಿಪಿ ಎಂ.ಎಲ್. ಲಾಥರ್ ತಿಳಿಸಿದ್ದಾರೆ.
‘ನಮಸ್ಕಾರ ದೇವರು’ ಅಂತ ಹೇಳೋದ್ಯಾಕೆ ಡಾಕ್ಟರ್​ ಬ್ರೋ?; ಹಣ ಬೇಕಾದಾಗ ಯಾವ ಹೋಟೆಲ್​ಗೆ ಹೋಗ್ತಾರೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 4 =
Remember me
