ಹಾಂಗ್​ಝೌ:ಇಂದು (ಸೆ.25) ನಡೆದ ಏಷ್ಯನ್ ಗೇಮ್ಸ್ ಮಹಿಳಾ ಟಿ20 ಫೈನಲ್​ 2023 ಪಂದ್ಯದಲ್ಲಿ ಎದುರಾಳಿ ಶ್ರೀಲಂಕಾ ತಂಡವನ್ನು 19 ರನ್​​ಗಳಿಂದ ಮಣಿಸುವ ಮೂಲಕ ಭಾರತ ಮಹಿಳಾ ಕ್ರಿಕೆಟ್ ತಂಡ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.
ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ ಮೈದಾನದಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ಸೋಲುಣಿಸುವ ಮೂಲಕ ಭಾರತೀಯ ವನಿತೆಯರು ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ನಲ್ಲಿ ಇಂದು ಆರಂಭವಾದ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆರಂಭಿಸಿದ ಭಾರತದ ಮಹಿಳಾ ಕ್ರಿಕೆಟ್​ ತಂಡ. ಇನಿಂಗ್ಸ್ ಆರಂಭಿಸಿದ ಭಾರತ ತಂಡದ ಯುವ ಸ್ಪೋಟಕ ಆಟಗಾರ್ತಿ ಶಫಾಲಿ ವರ್ಮಾ ಕೇವಲ 9 ರನ್​ಗಳಿಸಿ ನಿರ್ಗಮಿಸಿದ್ದರು. ಈ ಹಂತದಲ್ಲಿ ಜೊತೆಗೂಡಿದ ಸ್ಮೃತಿ ಮಂಧಾನ ಹಾಗೂ ಜೆಮಿಮಾ ರೋಡ್ರಿಗಸ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು.
ಸ್ಮತಿ ಮಂಧಾನ ಮತ್ತು ಜೆಮಿಮಾ ರೋಡ್ರಿಗಸ್ ಅವರ ಸಮಯೋಚಿತ ಆಟದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 116 ರನ್​ ಗಳಿಸಿತು. ಈ ಸುಲಭ ಗುರಿ ಬೆನ್ನತ್ತಿದ ಶ್ರೀಲಂಕಾ, ಭಾರತದ ಬೌಲರ್​ಗಳ ಮಾರಕ ದಾಳಿಗೆ ತತ್ತರಿಸಿತು. 20 ಓವರ್​​ಗಳಲ್ಲಿ 8 ವಿಕೆಟ್ ಕಳೆದುಕೊಂಡು 97 ರನ್​ಗಳಿಸಲಷ್ಟೇ ಶಕ್ತವಾಯಿತು. ಸೋತ ಶ್ರೀಲಂಕಾ ತಂಡವು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.
ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್) , ದೀಪ್ತಿ ಶರ್ಮಾ, ದೇವಿಕಾ ವೈದ್ಯ, ಅಮಂಜೋತ್ ಕೌರ್, ಪೂಜಾ ವಸ್ತ್ರಾಕರ್ ಟೈಟಾಸ್ ಸಾಧು, ರಾಜೇಶ್ವರಿ ಗಾಯಕ್ವಾಡ್.

ಚಾಮರಿ ಅಟ್ಟಪಟ್ಟು (ನಾಯಕ), ಅನುಷ್ಕಾ ಸಂಜೀವನಿ (ವಿಕೆಟ್ ಕೀಪರ್), ವಿಶ್ಮಿ ಗುಣರತ್ನೆ, ನೀಲಾಕ್ಷಿ ಡಿ ಸಿಲ್ವಾ, ಹಾಸಿನಿ ಪೆರೇರಾ, ಓಷಾಡಿ ರಣಸಿಂಗ್, ಇನೋಕಾ ರಣವೀರ, ಕವಿಶಾ ದಿಲ್ಹಾರಿ, ಉದೇಶಿಕಾ ಪ್ರಬೋಧನಿ, ಸುಗಂಧಿಕಾ ಪ್ರಿಯಾಶಿ ಕುಮಾರಿ.
Asian Games 2023: ಸೆಮಿಫೈನಲ್​ನಲ್ಲಿ ಬಾಂಗ್ಲಾವನ್ನು ಬಗ್ಗುಬಡಿದ ಭಾರತ: ಪದಕ ಖಚಿತ, ಚಿನ್ನದ ಮೇಲೆ ಕಣ್ಣು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + fourteen =
Remember me
