ಅಸ್ಸಾಂ:ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇದೀಗ ದಿನಗಣನೆ ಆರಂಭಗೊಂಡಿದ್ದು, ಕಾರ್ಯಕ್ರಮಕ್ಕೆ ಆಗಮಿಸಲಿರುವ ಸಹಸ್ರಾರು ಸಂಖ್ಯೆಯ ಭಕ್ತಾಧಿಗಳಿಗೆ ಅನುಕೂಲವಾಗುವಂತೆ ಈಗಾಗಲೇ ಉತ್ತರಪ್ರದೇಶ ಸರ್ಕಾರ ಸಕಲ ತಯಾರಿಗಳನ್ನು ಮಾಡಿಕೊಂಡಿದೆ. ಜನವರಿ 22ರಂದು ಅದ್ದೂರಿಯಾಗಿ ನಡೆಯಲಿರುವ ರಾಮನ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಗಣ್ಯಾತಿ ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, ಕಾಂಗ್ರೆಸ್​ ಪಕ್ಷದ ಸದಸ್ಯರನ್ನು ಕೂಡ ಆಹ್ವಾನಿಸಲಾಗಿತ್ತು. ಆದ್ರೆ, ಇದನ್ನು ತಿರಸ್ಕರಿಸಿದ ಕೈ ನಾಯಕರ ವಿರುದ್ಧ ಇದೀಗ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ಎಂಟರ ಘಟ್ಟಕ್ಕೇರಿದ ಚಿರಾಗ್-ಸಾತ್ವಿಕ್: ಅಶ್ವಿನಿ-ತನಿಷಾ ಮುನ್ನಡೆ, ಶ್ರೀಕಾಂತ್ ಔಟ್
ರಾಮಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನವನ್ನು ಕಾಂಗ್ರೆಸ್ ತಿರಸ್ಕರಿಸುತ್ತಿದ್ದಂತೆ ಪ್ರತಿಕ್ರಿಯಿಸಿದ ಅಸ್ಸಾಂ ಸಿಎಂ, “ಅಯೋಧ್ಯೆಗೆ ಆಹ್ವಾನ ಪಡೆಯಲು ಕಾಂಗ್ರೆಸ್ ಅರ್ಹವಲ್ಲ. ಕೊಟ್ಟ ಆಹ್ವಾನವನ್ನು ನಿರಾಕರಿಸುವ ಮೂಲಕ ಪಕ್ಷವು ತಮ್ಮ ಪಾಪಗಳನ್ನು ಸರಿಪಡಿಸಿಕೊಳ್ಳಲು ಸಿಕ್ಕಿದ್ದ ಸುವರ್ಣಾವಕಾಶವನ್ನು ಕಳೆದುಕೊಂಡಿದೆ” ಎಂದು ಹೇಳಿದ್ದಾರೆ.
“ಮೊದಲಿನಿಂದಲೂ ರಾಮ ಮಂದಿರದ ವಿರುದ್ಧ ತಮ್ಮ ಅಭಿಪ್ರಾಯಗಳಿಗಾಗಿ ಕಾಂಗ್ರೆಸ್ ಹಿಂದೂ ಸಮಾಜಕ್ಕೆ ಕ್ಷಮೆಯಾಚನೆ ಮಾಡಬಹುದಿತ್ತು. ನೆಹರು ಸೋಮನಾಥ ದೇಗುಲದಲ್ಲಿ ಮಾಡಿದಂತೆಯೇ, ರಾಮಮಂದಿರದ ವಿಷಯದಲ್ಲಿ ಕಾಂಗ್ರೆಸ್ ನಾಯಕತ್ವ ಮಾಡಿದೆ. ಇತಿಹಾಸವು ಅವರನ್ನು ಹಿಂದೂ ವಿರೋಧಿ ಪಕ್ಷ ಎಂದು ನಿರ್ಣಯಿಸುವುದು ಮುಂದುವರಿಯುತ್ತದೆ” ಎಂದು ಟ್ವೀಟ್ ಮಾಡಿದ, ವ್ಯಂಗ್ಯವಾಡಿದ್ದಾರೆ,(ಏಜೆನ್ಸೀಸ್).
ಈ ರಾಶಿಯವರಿಗಿಂದು ಶ್ರಮಕ್ಕೆ ತಕ್ಕ ಫಲ: ನಿತ್ಯಭವಿಷ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eighteen =
Remember me
