ಅಸ್ಸಾಂ:“2026ರ ನಂತರ ಕಾಂಗ್ರೆಸ್‌ನಲ್ಲಿ ಹಿಂದೂ ಸಮುದಾಯದಿಂದ ಯಾರೋಬ್ಬರು ಇರುವುದಿಲ್ಲ ಮತ್ತು 2032ರ ವೇಳೆಗೆ ಮುಸ್ಲಿಮರು ಯಾರೂ ಇರುವುದಿಲ್ಲ. 2032 ರೊಳಗೆ ಕಾಂಗ್ರೆಸ್‌ ಸಂಪೂರ್ಣವಾಗಿ ನಾಶವಾಗಲಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಈ ಸವಾಲು ಸ್ವೀಕರಿಸುವ ದಮ್ಮು, ತಾಕತ್ತು ನಿಮಗಿದ್ಯಾ? ಕೇಂದ್ರ ಸಚಿವರ ವಿರುದ್ಧ ಸಿಎಂ ಕಿಡಿ
ಕೇಂದ್ರ ಸಚಿವ ಹಾಗೂ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಅವರು ಮುಂಬರುವ ಲೋಕಸಭೆ ಚುನಾವಣೆಗೆ ದಿಬ್ರುಗಢ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಸಿಎಂ ಈ ವಿಷಯ ಮುನ್ನೆಲೆಗೆ ತಂದರು. ದಿಬ್ರುಗಢದಲ್ಲಿ ಸೋನೊವಾಲ್ ಅವರು ಅಸ್ಸಾಂ ರಾಷ್ಟ್ರೀಯ ಪರಿಷತ್ (ಎಜೆಪಿ) ಲುರಿಂಜ್ಯೋತಿ ಗೊಗೊಯ್ ವಿರುದ್ಧ ಕಣಕ್ಕಿಳಿದಿದ್ದಾರೆ ಎಂದು ಹೇಳುವಾಗ ಕಾಂಗ್ರೆಸ್​ ಸರ್ವನಾಶವಾಗಲಿದೆ ಎಂದರು.
ಗುವಾಹಟಿಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯನ್ನು ಉಲ್ಲೇಖಿಸಿ ಮಾತನಾಡಿದ ಸಿಎಂ, “ಕಾಂಗ್ರೆಸ್ ಸದಸ್ಯರು ಬಿಜೆಪಿಯತ್ತ ಮುಖ ಮಾಡಿರುವ ವೇಗವನ್ನು ನೀವು ಗಮನಿಸಿರಬಹುದು. ಇದನ್ನು ಗಣನೆಗೆ ತೆಗೆದುಕೊಂಡರೆ, ರಾಜೀವ್ ಭವನದಲ್ಲಿ ಕುರ್ಚಿಗಳು ಮತ್ತು ಕೊಠಡಿಗಳಿವೆ, ಆದರೆ ಅದನ್ನು ಆಕ್ರಮಿಸಲು ಯಾರೋಬ್ಬರು ಇರುವುದಿಲ್ಲ” ಎಂದರು.
ಇದನ್ನೂ ಓದಿ:ವಿಧಾನಪರಿಷತ್​ ಸದಸ್ಯತ್ವಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ; ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಶಾಕ್
“ಇದು ಅಸ್ಸಾಂನಲ್ಲಿನ ಪ್ರಸ್ತುತ ಸನ್ನಿವೇಶವಾಗಿದೆ. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಪರಿಸ್ಥಿತಿ ವೇಗವಾಗಿ ಮುಂದಕ್ಕೆ ಸಾಗಿತು. ನನ್ನ ಪ್ರಕಾರ ಕಾಂಗ್ರೆಸ್ 2032ರ ವೇಳೆಗೆ ಸರ್ವನಾಶವಾಗಲಿದೆ” ಎಂದು ಹೇಳಿದ್ದಾರೆ.
ಅದೊಂದು ಪಾತ್ರ ನಾನು ಒಪ್ಪಬಾರದಿತ್ತು! ಆ ತಪ್ಪಿಂದ ನನ್ನ ಆಸೆಯೇ ನುಚ್ಚುನೂರಾಯ್ತು: ನಟಿ ಅರ್ಚನಾ

ಬಾಳೆಹಣ್ಣಿನ ವಿಷಯದಲ್ಲಿ ಈ ತಪ್ಪನ್ನು ಮಾಡಲೇಬೇಡಿ! ಇಲ್ಲಿದೆ ಉಪಯುಕ್ತ ಮಾಹಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + one =
Remember me
