ದೀಸ್ಪುರ್​:ಕರೊನಾ ಬಿಕ್ಕಟ್ಟಿನ ನಡುವೆಯೂ ಅಸ್ಸಾಂನ 126 ವಿಧಾನಸಭಾ ಸ್ಥಾನಗಳಿಗೆ ನಡೆದ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ಸದ್ಯ ಟ್ರೆಂಡ್ ಪ್ರಕಾರ ಬಿಜೆಪಿ ಅಧಿಕಾರ ಗದ್ದುಗೆ ಏರುವ ಸಾಧ್ಯತೆ ಇದೆ.
11.30ರ ವೇಳೆಗೆ ಅಸ್ಸಾಂನಲ್ಲಿ ಬಿಜೆಪಿ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್​ 19 ಸ್ಥಾನದಲ್ಲಿ ಮುಂದಿದೆ. ಒಟ್ಟು 126 ಸ್ಥಾನಗಳಲ್ಲಿ ಅಧಿಕಾರದ ಗದ್ದುಗೆ ಏರಲು 64 ಸ್ಥಾನ ಬೇಕಾಗಿದೆ.
ಮತಎಣಿಕೆ ನಡುವೆಯೇ ಮಾಧ್ಯಮದೊಂದಿಗೆ ಮಾತನಾಡಿರುವ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್​, ಸದ್ಯದ ಟ್ರೆಂಡ್​ ನೋಡಿದರೆ, ಭಾರತೀಯ ಜನತಾ ಪಾರ್ಟಿ ಸರ್ಕಾರ ರಚನೆ ಮಾಡುವ ಲಕ್ಷಣಗಳು ಕಾಣಿಸುತ್ತಿವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರಂದು ಅಸ್ಸಾಂನಲ್ಲಿ ಚುನಾವಣೆ ಮೂರು ಹಂತಗಳಲ್ಲಿ ನಡೆಯಿತು. ಅಸ್ಸಾಂನಲ್ಲಿ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್, ಎಐಯುಡಿಎಫ್, ಬೊಡೋಲ್ಯಾಂಡ್ ಪೀಪಲ್ಸ್ ಕಣದಲ್ಲಿವೆ.
ಇಂಡಿಯಾ ಟುಡೆ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್​ ಪೊಲ್​ ಪ್ರಕಾರ ಅಸ್ಸಾಂನಲ್ಲಿ ಎನ್​ಡಿಎ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲಿದೆ ಎಂಬ ಮುನ್ಸೂಚನೆ ನೀಡಿದೆ.(ಏಜೆನ್ಸೀಸ್​)
As per the trends, it is clear that Bharatiya Janata Party will form the government in Assam: Assam CM Sarbananda Sonowal#Assampic.twitter.com/EuxHnucmtD— ANI (@ANI)May 2, 2021
As per the trends, it is clear that Bharatiya Janata Party will form the government in Assam: Assam CM Sarbananda Sonowal#Assampic.twitter.com/EuxHnucmtD
ತಮಿಳುನಾಡಲ್ಲಿ ಸೂರ್ಯೋದಯ? ಸಿಎಂ ಖುರ್ಚಿಯತ್ತ ಸ್ಟಾಲಿನ್‌- ಮ್ಯಾಜಿಕ್‌ ನಂಬರ್‌ ದಾಟಿದ ಡಿಎಂಕೆ
ನೋಡ್ತಾ ಇರಿ ಸಂಜೆ ವೇಳೆಗೆ ಚುನಾವಣಾ ಫಲಿತಾಂಶವೇ ಬದಲಾಗಲಿದೆ: ಕೈಲಾಶ್​ ವಿಜಯವರ್ಗಿಯ
ಕೇರಳದ ಸಿಎಂ ಮೊಗದಲ್ಲಿ ಭಾರಿ ಹರ್ಷ: ಎಲ್‌ಡಿಎಫ್‌ ಮೈತ್ರಿಕೂಟ 78 ಕ್ಷೇತ್ರಗಳಲ್ಲಿ ದಾ‍ಪುಗಾಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
