ಗುವಾಹಟಿ:ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಶನಿವಾರ ಮತ್ತಷ್ಟು ಬಿಗಡಾಯಿಸಿದ್ದು, ಸಾವಿನ ಸಂಖ್ಯೆ 118ಕ್ಕೇರಿದೆ. ಕ್ಯಾಚಾರ್ ಜಿಲ್ಲೆಯ ಸಿಲ್ಚಾರ್ ಪಟ್ಟಣವು 6ನೇ ದಿನವೂ ನದಿಯಂತಾಗಿದೆ. ಎಲೆಲ್ಲೂ ನೀರು ತುಂಬಿದ್ದರೂ ಕುಡಿಯುವ ನೀರಿನ ಬಾಟಲ್​ಗೆ 100 ರೂಪಾಯಿ ತೆರಬೇಕಾದ ಪರಿಸ್ಥಿತಿ ಇದೆ. ಪ್ರವಾಹ ಮತ್ತು ಭೂಕುಸಿತದಿಂದ ಕಳೆದ 24 ಗಂಟೆಗಳಲ್ಲಿ ಹತ್ತು ಜನರು ಮೃತಪಟ್ಟಿದ್ದಾರೆ. ಬರ್ಪೆಟಾ, ಧುಬ್ರಿ, ಕರೀಮ್ಂಜ್ ಮತ್ತು ಉದಲ್ಗುರಿ ಜಿಲ್ಲೆಗಳಲ್ಲಿ ತಲಾ ಇಬ್ಬರು, ಕ್ಯಾಚಾರ್ ಮತ್ತು ಮೊರಿಗಾಂವ್​ನಲ್ಲಿ ತಲಾ ಒಬ್ಬರು ಅಸುನೀಗಿದ್ದಾರೆ. ಧುಬ್ರಿಯಲ್ಲಿ ಬ್ರಹ್ಮಪುತ್ರ ಮತ್ತು ನಾಗಾಂವ್​ನಲ್ಲಿ ಕೊಪಿಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕ್ಯಾಚಾರ್ ಜಿಲ್ಲಾಡಳಿತವು ಸಿಲ್ಚಾರ್​ನಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಅನಾರೋಗ್ಯಕ್ಕೊಳಗಾದವರನ್ನು ಆಸ್ಪತ್ರೆಗೆ ಸೇರಿಸಲು ಆದ್ಯತೆ ನೀಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹೆಲಿಕಾಪ್ಟರ್ ಮೂಲಕ ಆಹಾರ ಪೊಟ್ಟಣ ವಿತರಣೆ:ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಪೊಟ್ಟಣದಲ್ಲಿ ಆಹಾರ, ಕುಡಿಯುವ ನೀರಿನ ಬಾಟಲಿಗಳು ಮತ್ತು ಇತರೆ ಅಗತ್ಯ ವಸ್ತುಗಳನ್ನು ಏರ್​ಡ್ರಾಪ್ ಮಾಡಲಾಗುತ್ತಿದೆ. ಸಿಲ್ಚಾರ್​ನಲ್ಲಿ ಪ್ರವಾಹ ಪರಿಸ್ಥಿತಿ ತಿಳಿದುಕೊಳ್ಳಲು ಮತ್ತು ಸಂತ್ರಸ್ತ ಜನರಿಗೆ ಪರಿಹಾರ ಸಾಮಗ್ರಿ ಒದಗಿಸಲು ಎರಡು ಡ್ರೋನ್​ಗಳನ್ನು ನಿಯೋಜಿಸಲಾಗಿದೆ. 510 ಗ್ರಾಮಗಳ ಪೈಕಿ 2,65,788 ಜನರು 717 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಎಎಸ್​ಡಿಎಂಎ ಬುಲೆಟಿನ್ ತಿಳಿಸಿದೆ.
ರಿಲಯನ್ಸ್​ನಿಂದ 25 ಕೋಟಿ ರೂ. ದೇಣಿಗೆ:ಅಸ್ಸಾಂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಿಲಯನ್ಸ್ ಫೌಂಡೇಷನ್ 25 ಕೋಟಿ ರೂ. ದೇಣಿಗೆ ನೀಡಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಾಮಾಜಿಕ ಮಾಧ್ಯಮದ ಮೂಲಕ ಕೃತಜ್ಞತೆ ಸಲ್ಲಿಸಿದ್ದು, ‘ಈ ನಿರ್ಣಾಯಕ ಘಟ್ಟದಲ್ಲಿ ಅಸ್ಸಾಂ ಜನರ ಜತೆ ನಿಂತಿದ್ದಕ್ಕಾಗಿ ಮುಕೇಶ್ ಅಂಬಾನಿ ಕುಟುಂಬಕ್ಕೆ ನನ್ನ ಕೃತಜ್ಞತೆಗಳು’ ಎಂದು ಹೇಳಿದ್ದಾರೆ.
ಕಾರಿನ ಗಾಜನ್ನು ಒರೆಸುತ್ತ ಫಾಸ್ಟ್ಯಾಗ್ ಹಣ ಕಬಳಿಸುವವರ ಹಾವಳಿ?; ಹೊರಬಿತ್ತು ಅಸಲಿಯತ್ತು…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 20 =
Remember me
