ದಿಸ್ಪುರ್:ಅಸ್ಸಾಂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಅಧ್ಯಕ್ಷ ರಿಪುನ್ ಬೋರಾ ಭಾನುವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ:‘ನಟ, ರಾಜಕಾರಣಿ ಯಾರನ್ನು ಮದುವೆಯಾಗ್ತೀರಿ?’: ಪ್ರೇಕ್ಷಕನ ಪ್ರಶ್ನೆಗೆ ಕಂಗನಾ ಹೇಳಿದ್ದೇನು?
ಬಳಿಕ ಮಾತನಾಡಿದ ಅವರು, ಈಶಾನ್ಯ ರಾಜ್ಯದ ಜನರು ಟಿಎಂಸಿಯನ್ನು ತಮ್ಮ ಪಕ್ಷವೆಂದು ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂದು ಅವರು ಹೇಳಿದ್ದಾರೆ. ಇದರೊಂದಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಹಿನ್ನಡೆಯಾದಂತಾಗಿದೆ.
ಅಸ್ಸಾಂನ ಜನರು ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯನ್ನು ‘ಪ್ರಾದೇಶಿಕ ಪಕ್ಷ’ ಎಂದು ಪರಿಗಣಿಸುತ್ತಾರೆ. ಆದರೆ ಅಸ್ಸಾಂನಲ್ಲಿ ಅದನ್ನು ತಮ್ಮ ಪಕ್ಷವೆಂದು ಒಪ್ಪಿಕೊಳ್ಳಲು ಬಯಸುವುದಿಲ್ಲ ಎಂದು ಅವರು ಹೇಳಿದರು.
ರಾಷ್ಟ್ರೀಯ ಮಟ್ಟದಲ್ಲಿ ಅಸ್ಸಾಂ​ ನಾಯಕನನ್ನು ಸೇರ್ಪಡೆಗೊಳಿಸಲು ಮತ್ತು ಕೋಲ್ಕತ್ತಾದ ಟೋಲಿಗಂಜ್‌ನಲ್ಲಿರುವ ಭಾರತ ರತ್ನ ಡಾ ಭೂಪೇನ್ ಹಜಾರಿಕಾ ಅವರ ನಿವಾಸವನ್ನು ಪಾರಂಪರಿಕ ತಾಣವೆಂದು ಘೋಷಿಸಲು ಒತ್ತಾಯಿಸಿದ್ದೆವು. ಕೂಚ್ ಬೆಹಾರ್‌ನಲ್ಲಿರುವ ಮಧುಪುರ್ ಸತ್ರವನ್ನು ಸಾಂಸ್ಕೃತಿಕ ಕೇಂದ್ರವನ್ನಾಗಿ ಪರಿವರ್ತಿಸಲು ಸೂಚಿಸಲಾಗಿದೆ. ಆದರೆ ಅದಾವುದೂ ಆಗಲಿಲ್ಲ ಎಂದು ಅವರು ಹೇಳಿದರು.
ಈ ಸಮಸ್ಯೆಗಳನ್ನು ಪರಿಹರಿಸಲು ಕಳೆದ ಒಂದೂವರೆ ವರ್ಷಗಳಿಂದ ಅಭಿಷೇಕ್ ಬ್ಯಾನರ್ಜಿ ಮತ್ತು ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತಿದ್ದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ ಎಂದು ರಿಪುನ್ ಬೋರಾ ಹೇಳಿದ್ದಾರೆ.
ಅಸ್ಸಾಂನ ಜನರು ಬೇರೆ ರಾಜ್ಯದ ಪಕ್ಷವನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಹಲವು ಸವಾಲುಗಳಿಗೆ ಸಮರ್ಪಕ ಪರಿಹಾರ ದೊರೆಯದ ಕಾರಣ ಈ ಕಠಿಣ ನಿರ್ಧಾರ ಕೈಗೊಳ್ಳಬೇಕಾಯಿತು ಎಂದರು.
‘ಸಾಮಾನ್ಯ ವ್ಯಕ್ತಿಯಂತೆ ಕಂಡರೂ ರೋಹಿತ್​ ಅದ್ಭುತ ಆಟಗಾರ’: ಮರೆಗುಳಿ ಎಂದವರಿಗೆ ಖ್ಯಾತ ಅಂಪೈರ್ ತಿರುಗೇಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 14 =
Remember me
