ದಿಸ್ಪುರ್:ರಾಜ್ಯದಲ್ಲಿ ಮುಂಬರುವ ಕೆಲವು ವರ್ಷಗಳಲ್ಲಿ ಮುಸ್ಲಿಮರ ಜನಸಂಖ್ಯೆಯು ಸಾಕಷ್ಟು ಹೆಚ್ಚಾಗಲಿದೆ. 2041ರ ವೇಳೆಗೆ ಅಸ್ಸಾಂ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಲಿದೆ. ಇದು ವಾಸ್ತವ ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಇದನ್ನು ಓದಿ:ಯೋಗಿ ಆದಿತ್ಯನಾಥ್​​ ಸರ್ಕಾರದ ನಡೆಗೆ ವ್ಯಾಪಕ ಟೀಕೆ; ಅಸ್ಪೃಶ್ಯತೆ ಪಾಲಿಸಬಾರದು ಎಂದಿದ್ದೇಕೆ?
ಅಂಕಿಅಂಶಗಳ ಪ್ರಕಾರ, ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆಯು ಶೇಕಡಾ 40 ರಷ್ಟಿದೆ. 2041ರ ವೇಳೆಗೆ ಅಸ್ಸಾಂ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಲಿದೆ. ಇದು ವಾಸ್ತವ ಮತ್ತು ಇದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಪ್ರತಿ ಹತ್ತು ವರ್ಷಗಳಿಗೊಮ್ಮೆ ಹಿಂದೂಗಳ ಜನಸಂಖ್ಯೆಯು ಕೇವಲ 16 ಪ್ರತಿಶತದಷ್ಟು ಮಾತ್ರ ಹೆಚ್ಚಾದರೆ, ಮುಸ್ಲಿಂ ಜನಸಂಖ್ಯೆಯು ಸುಮಾರು 30 ಪ್ರತಿಶತದಷ್ಟು ಹೆಚ್ಚುತ್ತಿದೆ ಎಂದು ಅವರು ತಿಳಿಸಿದರು. ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿ ಮುಸ್ಲಿಂ ಸಮುದಾಯದ ಜನಸಂಖ್ಯೆಯ ಬೆಳವಣಿಗೆಯನ್ನು ಕಡಿಮೆ ಮಾಡಲು ತಮ್ಮ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆಯನ್ನು ತಡೆಯುವಲ್ಲಿ ದೇಶದ ಅತ್ಯಂತ ಹಳೆಯ ಪಕ್ಷವು ಪ್ರಮುಖ ಪಾತ್ರ ವಹಿಸುತ್ತದೆ. ರಾಹುಲ್ ಗಾಂಧಿ ಜನಸಂಖ್ಯಾ ನಿಯಂತ್ರಣದ ಬ್ರಾಂಡ್ ಅಂಬಾಸಿಡರ್ ಆಗಿದ್ದರೆ ಆಗ ಈ ಪರಿಸ್ಥಿತಿಯನ್ನು ನಿಯಂತ್ರಿಸಬಹುದು. ಏಕೆಂದರೆ ಈ ಸಮುದಾಯ ಅವರ ಮಾತನ್ನು ಮಾತ್ರ ಕೇಳುತ್ತದೆ ಎಂದು ಎಂದು ಕಾಂಗ್ರೆಸ್​ ಬಗ್ಗೆ ಮತ್ತಷ್ಟು ವ್ಯಂಗ್ಯ ಮಾಡಿದ್ದಾರೆ. (ಏಜೆನ್ಸೀಸ್​​)
ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಂಚನೆ ಬಹಿರಂಗ; ಯುಪಿಎಸ್​ಸಿಯಿಂದ ಪ್ರಕರಣ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − ten =
Remember me
