ನವದೆಹಲಿ:ಕರ್ನಾಟಕವೂ ಸೇರಿದಂತೆ ಈ ಬಾರಿ 9 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೂರು ರಾಜ್ಯಗಳ ಚುನಾವಣಾ ದಿನಾಂಕ ಇಂದು (ಜ. 18) ಪ್ರಕಟವಾಗಿದೆ. ತ್ರಿಪುರಾ, ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಅಧಿಕಾರಿ ರಾಜೀವ್​ ಕುಮಾರ್​ ಘೋಷಣೆ ಮಾಡಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಫೆ.16ರಂದು ತ್ರಿಪುರಾ, ಫೆ.27ರಂದು ಮೇಘಾಲಯ ಹಾಗೂ ನಾಗಾಲ್ಯಾಂಡ್​ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಮಾರ್ಚ್​ 2ರಂದು ಮೂರು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ ಎಂದು ರಾಜೀವ್​ ಕುಮಾರ್​ ತಿಳಿಸಿದರು.
ಮೂರು ರಾಜ್ಯಗಳ ಶಾಸನ ಸಭೆಗಳ ಅವಧಿಯು ಕ್ರಮವಾಗಿ ಮಾರ್ಚ್ 12, ಮಾರ್ಚ್ 15 ಮತ್ತು ಮಾರ್ಚ್ 22 ರಂದು ಮುಕ್ತಾಯಗೊಳ್ಳಲಿದೆ. ಪ್ರತಿ ರಾಜ್ಯದಲ್ಲಿ 60 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಿಗದಿಪಡಿಸಲಾಗಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾದಲ್ಲಿ ಒಟ್ಟು 62.8 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ ಎಂದು ರಾಜೀವ್ ಕುಮಾರ್ ಹೇಳಿದರು.

ಮದ್ವೆ ವೇಳೆ ರಾಜ್ಯದಲ್ಲೇ ಟ್ರೆಂಡ್​ ಆಗಿದ್ದ ಐಎಎಸ್​​ ಅಧಿಕಾರಿ ಮತ್ತು ರಾಜಕಾರಣಿಯ ಲವ್​ ಸ್ಟೋರಿ ಇಲ್ಲಿದೆ…

ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿ: ವಿಜಯವಾಣಿ- ದಿಗ್ವಿಜಯ ಬಳಗದ ಸಿದ್ದು ಕಾಳೋಜಿ, ನಾಗರಾಜ್​ ಭಟ್, ಜಗನ್​, ಅವಿನಾಶ್​, ಹರೀಶ್​ ಸೇರಿ ಹಲವರಿಗೆ ಪ್ರಶಸ್ತಿ

ಪೊಲೀಸರ ಯಶಸ್ವಿ ಕಾರ್ಯಾಚರಣೆ; ನಕಲಿ ಹಾರ್ಪಿಕ್, ಆಲ್​ಔಟ್ ಮಾರಾಟ ಮಾಡುತ್ತಿದ್ದ ವಂಚಕರು ಅಂದರ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − 15 =
Remember me
