ನವದೆಹಲಿ:ಮಂತ್ರಿಯ ಮೇಲೆಯೇ ಪೊಲೀಸ್ ಅಧಿಕಾರಿ ಗುಂಡು ಹೊಡೆದಿರುವುದನ್ನು ಎಲ್ಲಾದರೂ ಕೇಳಿದ್ದೀರಾ? ಖಂಡಿತವಾಗಿಯೂ ಇಲ್ಲ. ಆದರೆ ಈ ವಿಲಕ್ಷಣ ಘಟನೆ ಒಡಿಶಾದಲ್ಲಿ ನಡೆದಿದ್ದು ಈಗ ಗುಂಡು ಹೊಡೆಸಿಕೊಂಡ ಆರೋಗ್ಯ ಸಚಿವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರ ಮೇಲೆ ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡು ಹಾರಿಸಿದ ಘಟನೆ ಜಾರ್ಸುಗುಡ ಜಿಲ್ಲೆಯ ಬ್ರಜರಾಜನಗರದ ಬಳಿಯ ಗಾಂಧಿ ಚೌಕ್ ಬಳಿ ಇಂದು ನಡೆದಿದೆ. ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ತೆರಳುತ್ತಿದ್ದ ಒಡಿಶಾದ ಆರೋಗ್ಯ ಸಚಿವರ ಮೇಲೆ ಗುಂಡು ಹಾರಿಸಲಾಗಿದ್ದು ಅದು ಅವರ ಎದೆಗೆ ತಗುಲಿದೆ. ಅವರ ಪರಿಸ್ಥಿತಿ ಗಂಭಿರವಾಗಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ತಮ್ಮ ವಾಹನದಿಂದ ಹೊರಬರುತ್ತಿದ್ದಂತೆಯೇ ಅವರ ಮೇಲೆ ಗುಂಡಿನ ದಾಳಿ ಮಾಡಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆದರೆ ಪೊಲೀಸ್ ಅಧಿಕಾರಿ ಮಾಡಿದ ದಾಳಿಯ ಹಿಂದಿನ ಉದ್ದೇಶಗಳು ಇನ್ನೂ ಅಸ್ಪಷ್ಟವಾಗಿವೆ. ರಕ್ತಸಿಕ್ತ ಶ್ರೀ ದಾಸ್ ಅವರನ್ನು ಕಾರಿನಲ್ಲಿ ಕರೆದೊಯ್ಯುವುದನ್ನು ಸ್ಥಳದ ವೀಡಿಯೊಗಳು ತೋರಿಸಿವೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
