ನವದೆಹಲಿ:ಕರೊನಾ ಲಸಿಕೆ ಸಂಶೋಧನೆಯಲ್ಲಿ ಭಾರಿ ಮುಂಚೂಣಿಯಲ್ಲಿರುವ ಹಾಗೂ ಅತಿ ಕಡಿಮೆ ಬೆಲೆಗೆ ಮಾರುಕಟ್ಟೆಗೆ ಒದಗಿಸಲಿರುವ ಆಕ್ಸ್​ಫರ್ಡ್​ ವಿವಿಯ ಔಷಧದ ಕ್ಲಿನಿಕಲ್​ ಟ್ರಯಲ್​ ಸದ್ಯಕ್ಕೆ ಸ್ಥಗಿತಗೊಂಡಿದೆ.
ಲಸಿಕೆ ಪಡೆದ ವ್ಯಕ್ತಿಯೊಬ್ಬರಲ್ಲಿ ಗಂಭೀರ ಅಡ್ಡ ಪರಿಣಾಮ ಹಾಗೂ ವಿವರಣೆ ಸಿಗದ ಸ್ಥಿತಿ ಉಂಟಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಆಕ್ಸ್​ಫರ್ಡ್​ ವಿವಿ ತಂಡ ಅಭಿವೃದ್ಧಿಪಡಿಸುತ್ತಿರುವ ಈ ಲಸಿಕೆಯನ್ನು ಸದ್ಯ ಅಮೆರಿಕ, ಬ್ರೆಜಿಲ್, ದಕ್ಷಿಣ ಆಫ್ರಿಕಾ ಸೇರಿ ​60 ಕಡೆಗಳಲ್ಲಿ ಮೂರನೇ ಹಂತದ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಇದನ್ನೂ ಓದಿ;ಶುರುವಾಯ್ತು 225 ರೂ. ಬೆಲೆಯ ಕರೊನಾ ಲಸಿಕೆ ಕ್ಲಿನಿಕಲ್​ ಟ್ರಯಲ್​; ಮೈಸೂರು ಸೇರಿ 17 ಕಡೆ ಪ್ರಯೋಗ
ಭಾರತದಲ್ಲೂ ಈ ಲಸಿಕೆಯ ಎರಡನೇ ಹಾಗೂ ಮೂರನೇ ಹಂತದ ಪರೀಕ್ಷೆಗೆ ಅನುಮತಿ ನೀಡಲಾಗಿದೆ. ಮೈಸೂರಿನ ಜೆಎಸ್​ಎಸ್​ ಆಸ್ಪತ್ರೆ ಸೇರಿ 17 ಕಡೆಗಳಲ್ಲಿ ಮಾನವರ ಮೇಲೆ ಪ್ರಯೋಗ ಮಾಡಲಾಗುತ್ತಿದೆ. ಸದ್ಯ ಇದನ್ನೂ ಕೂಡ ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.ಕರೊನಾ ವೈರಸ್​ ಸೋಂಕು ಹರಡುವುದನ್ನು ತಡೆಯಲು ತ್ವರಿತವಾಗಿ ಲಸಿಕೆ ಪಡೆಯುವ ಗುರಿಗೆ ಇದೊಂದು ಹಿನ್ನಡೆ ಎಂದೇ ವಿಶ್ಲೇಷಿಸಲಾಗಿದೆ. ಜನರಲ್ಲಿದ್ದ ಭಾರಿ ನಿರೀಕ್ಷೆಗೂ ನೀರೆರೆಚಿದಂತಾಗಿದೆ.
ಆದರೆ, ಲಸಿಕೆ ಸಂಶೋಧನೆ ವೇಳೆ ಇಂಥದ್ದೊಂದು ಬೆಳವಣಿಗೆ ಅನಿರೀಕ್ಷಿತವೇನಲ್ಲ. ಇಂಥವುಗಳನ್ನು ನಿವಾರಿಸಿಕೊಂಡೇ ಲಸಿಕೆಯನ್ನು ಸಿದ್ಧಪಡಿಸಬೇಕಾಗುತ್ತದೆ. ಪ್ರಯೋಗ ಹಂತದಲ್ಲಿ ಇಂಥ ತೊಂದರೆಗಳು ಎದುರಾಗುವುದು ಕೂಡ ಉತ್ತಮ ಬೆಳವಣಿಗೆಯೇ ಆಗಿರುತ್ತದೆ. ಇದೆಲ್ಲವನ್ನೂ ಮೀರಿ ಅತ್ಯಂತ ಸುರಕ್ಷಿತ ಲಸಿಕೆ ತಯಾರಿಯ ಹೊಣೆ ಕಂಪನಿ ಮೇಲಿರುತ್ತದೆ ಎಂದೇ ತಜ್ಞರು ಹೇಳುತ್ತಾರೆ.
ಒಂದೇ ದಿನಕ್ಕೆ 1.19 ಲಕ್ಷ ಕೋಟಿ ರೂ. ಕಳೆದುಕೊಂಡ ಎಲಾನ್​ ಮಸ್ಕ್​; ಟೆಸ್ಲಾ ಒಡೆಯನ ಎಡವಟ್ಟೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
