ಜೋಧ್​ಪುರ:ಲಾರಿ ಮತ್ತು ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದುಕೊಂಡಿರುವ ಘಟನೆ ರಾಜಸ್ಥಾನದ ಜೋಧ್​ಪುರ್​ ಜಿಲ್ಲೆಯ ಹೆದ್ದಾರಿಯೊಂದರಲ್ಲಿ ನಡೆದಿದೆ. ಘಟನೆಯಲ್ಲಿ 11 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಸ್ಥಿತಿ ಗಂಭೀರವಾಗಿದೆ.
ಇಂದು ಬೆಳಗ್ಗೆ ಫಲೋಡಿ ಬಲೋತ್ರಾ ಹೆದ್ದಾರಿಯಲ್ಲಿ ಬರುತ್ತಿದ್ದ ಬೊಲೆರೊ ಕಾರಿಗೆ ಸೊಯಿಂಟ್ರಾ ಗ್ರಾಮದ ಬಳಿ ಲಾರಿಯು ಡಿಕ್ಕಿ ಹೊಡೆದಿದೆ. ಕಾರು ಲಾರಿಯ ಅಡಿಯಾಗಿದ್ದು ಪೂರ್ತಿಯಾಗಿ ಜಜ್ಜಿ ಹೋಗಿದೆ. ಘಟನೆಯಲ್ಲಿ ಆರು ಮಹಿಳೆಯರು, ನಾಲ್ಕು ಪುರುಷರು ಮತ್ತು ಒಂದು ಮಗು ಮೃತರಾಗಿದ್ದಾರೆ. ಅಪಘಾತವಾದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದು, ಮೃತ ದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ. ಮೂರು ಜನರ ಸ್ಥೀತಿ ಗಂಭೀರವಾಗಿದ್ದು ಅವರನ್ನು ಜೋಧ್​ಪುರ್​ನ ಎಮ್​ಡಿಎಮ್​ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆ ನಡೆಸ ಸ್ಥಳಕ್ಕೆ ಪೊಲೀಸರು, ಆಡಳಿತ ಅಧಿಕಾರಿಗಳು ಮತ್ತು ಸ್ಥಳೀಯ ಪ್ರತಿನಿಧಿಗಳು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ದುರ್ಘಟನೆಯ ಕುರಿತಾಗಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಟ್ವೀಟ್​ ಮಾಡಿದ್ದು, “ಜೋಧ್​ಪುರದ ಹೆದ್ದಾರಿಯಲ್ಲಿ ಸಂಭವಿಸಿರುವ ದುರಂತದ ಬಗ್ಗೆ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಘಟನೆಯಲ್ಲಿ 11 ಜನರು ಪ್ರಾಣ ಕಳೆದುಕೊಂಡಿದ್ದಾರೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ಈ ನಷ್ಟವನ್ನು ಭರಿಸಲು ದೇವರು ಶಕ್ತಿ ನೀಡಲಿ ಎಂದು ಬೇಡಿಕೊಳ್ಳುತ್ತೇನೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ನುಡಿದಿದ್ದಾರೆ.(ಏಜೆನ್ಸೀಸ್​)
Deeply saddened to learn about tragic accident on Balotra-Phalodi Mega Highway in Shergarh area,#Jodhpurin which 11 people have lost lives. My heartfelt condolences to those who lost their loved ones,may god give them strength to bear this loss. I wish speedy recovery to injured
— Ashok Gehlot (@ashokgehlot51)March 14, 2020

VIDEO| ಅಬ್ಬಬ್ಬಾ! ಬಾತುಕೋಳಿಗಳ ಗೆಳೆತನ ಹೀಗೂ ಇರುತ್ತಾ?

ತೆಲುಗು ಸೂಪರ್​ಸ್ಟಾರ್​ ಚಿರಂಜೀವಿ ಸಿನಿಮಾ ಧಿಕ್ಕರಿಸಿ ನಟಿ ತ್ರಿಶಾ ಚಿತ್ರತಂಡದಿಂದ ಹೊರನಡೆದಿದ್ದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 9 =
Remember me
