ಬರುಚ್​:ಶನಿವಾರ ನಸುಕಿನ ಜಾವದಲ್ಲಿ ಉಂಟಾದ ಅಗ್ನಿ ಅವಘಡದಲ್ಲಿ ಸುಮಾರು 12 ಮಂದಿ ಕರೊನಾ ರೋಗಿಗಳು ಮೃತಪಟ್ಟಿರುವ ಘಟನೆ ಗುಜರಾತ್​ನ ಬರುಚ್​ನಲ್ಲಿರುವ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಸುಮಾರು 50 ಇತರೆ ರೋಗಿಗಳು ವೆಲ್​ಫೇರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಲ್ಲರನ್ನು ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರ.
ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಮತ್ತು ಹೊಗೆಯಿಂದಾಗಿ ಉಸಿರಾಡಲು ಆಗದೇ 12 ಕರೊನಾ ರೋಗಿಗಳು ಸಾವಿಗೀಡಾಗಿದ್ದಾರೆ ಎಂದು ಬರುಚ್​ ಪೊಲೀಸ್​ ವರಿಷ್ಠಾಧಿಕಾರಿ ರಾಜೇಂದ್ರಸಿನ್ಹ್​ ಚುದಾಸಮಾ ಹೇಳಿದ್ದಾರೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಆತಂಕವನ್ನು ಚುದಾಸಮಾ ವ್ಯಕ್ತಪಡಿಸಿದ್ದಾರೆ.
ಬರುಚ್​-ಜಂಬುಸರ್​ ಹೆದ್ದಾರಿ ಬಳಿಯಿದ್ದ ನಾಲ್ಕು ಅಂತಸ್ತಿನ ಕಟ್ಟಡವನ್ನು ಕೋವಿಡ್​ 19 ಆಸ್ಪತ್ರೆಯಾಗಿ ಮಾಡಲಾಗಿತ್ತು, ಇದನ್ನು ಟ್ರಸ್ಟ್​ ಒಂದು ನಡೆಸುತ್ತಿತ್ತು. ಮಧ್ಯರಾತ್ರು 1 ಗಂಟೆ ಸುಮಾರಿಗೆ ನೆಲಮಹಡಿಯಲ್ಲಿರುವ ಕೋವಿಡ್​ ವಾರ್ಡ್​ನಲ್ಲಿ ಬೆಂಕಿ ಹೊತ್ತಿಕೊಂಡಿತು ಎಂದು ಅಗ್ನಿಶಾಮಕ ಅಧಿಕಾರಿ ಶೈಲೇಶ್​ ಸಾನ್ಸಿಯಾ ಹೇಳಿದ್ದಾರೆ.
ಒಂದು ಗಂಟೆಯೊಳಗೆ ಬೆಂಕಿಯನ್ನು ತಹಬದಿಗೆ ತಂದು 50 ರೋಗಿಗಳನ್ನು ರಕ್ಷಣೆ ಮಾಡಲಾಯಿತು. ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.(ಏಜೆನ್ಸೀಸ್​)
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪರೂಪದ ವ್ಯಕ್ತಿಯ ಭೇಟಿ.

ಇಂದು ಮುಂಬೈ ಇಂಡಿಯನ್ಸ್- ಸಿಎಸ್‌ಕೆ ಹಣಾಹಣಿ

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಮೀಸಲಾತಿ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
