ಡಿಸ್ಪುರ್​:ಅಸ್ಸಾಂನಲ್ಲಿ ಕಳೆದ ಕೆಲವು ದಿನಗಳಿಂದಲೂ ಸಿಕ್ಕಾಪಟೆ ಮಳೆಯಾಗುತ್ತಿದ್ದು, ವಿವಿಧೆಡೆ ಭೂಕುಸಿತ ಉಂಟಾಗಿ ಇಂದು ಸುಮಾರು 20 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆ ಪ್ರದೇಶದ ವಿವಿಧ ಕಡೆಗಳಲ್ಲಿ ಭೂಕುಸಿತ ಉಂಟಾಗಿದೆ. ಈ ಪ್ರದೇಶಗಳಲ್ಲಿ ಕಳೆದ ಹಲವು ದಿನಗಳಿಂದಲೂ ವಿಪರೀತ ಮಳೆ ಸುರಿಯುತ್ತಿತ್ತು ಎಂದು ವರದಿಯಾಗಿದೆ.ಕ್ಯಾಚರ್ ಮತ್ತು ಹೈಲಕಂಡಿಯಲ್ಲಿ ತಲಾ ಏಳು ಮಂದಿ ಮತ್ತು ಕರೀಂಗಂಜ್​ನಲ್ಲಿ ಆರು ಮಂದಿ ಮೃತಪಟ್ಟಿದ್ದು, ಉಳಿದವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ:ತಬ್ಲಿಘಿಗಳಿಗೆ ಬಾಯಿಗೆ ಬಂದಂತೆ ಬೈದ ವೈದ್ಯೆ; ವಿವಾದ ಆಗುತ್ತಿದ್ದಂತೆ ‘ನನಗೆ ಅವರೆಂದರೆ ತುಂಬ ಪ್ರೀತಿ’ ಎಂದರು…
ಕ್ಯಾಚರ್​ ಜಿಲ್ಲೆಯ ಜಯ್​ಪುರದಲ್ಲಿ ತಜಿಂ ಉದ್ದಿನ್​ ಲಸ್ಕರ್​ ಹಾಗೂ ಆತನ ಮೂರು ಹೆಣ್ಣುಮಕ್ಕಳು, ಮೂವರು ಗಂಡು ಮಕ್ಕಳು ಮಣ್ಣಿನೊಳಗೆ ಜೀವಂತ ಸಮಾಧಿಯಾಗಿದ್ದಾರೆ. ಅವರ ಮನೆ ಸಂಪೂರ್ಣವಾಗಿ ಕುಸಿದುಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಸ್ಕರ್​ ಅವರ ಪತ್ನಿ ಹಾಗೂ ಇನ್ನೊಂದು ಪುತ್ರನನ್ನು ಪೊಲೀಸರು ರಕ್ಷಣೆ ಮಾಡಿ, ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೈಲ್​ಕಂಡಿಯಲ್ಲಿ ನಾಲ್ವರು ಮಹಿಳೆಯರು, ಒಂದು ಮಗು ಸೇರಿ ಒಟ್ಟು ಏಳು ಮಂದಿ ಭೂಕುಸಿತಕ್ಕೆ ಬಲಿಯಾಗಿದ್ದು, ಕರೀಂಗಂಜ್​​ನಲ್ಲಿ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ.ಅಸ್ಸಾಂ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ಮೃತದೇಹಗಳನ್ನು ಮಣ್ಣಿನಿಂದ ತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹಾಗೇ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಜಿಲ್ಲೆಯಲ್ಲಿ ಕರೊನಾ ಹೆಚ್ಚುವ ಆತಂಕ; ಹೊರರಾಜ್ಯ, ಜಿಲ್ಲೆಗಳಿಂದ ಸೋಂಕು ಹರಡುವ ಭೀತಿ
ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರು ಮೃತಪಟ್ಟವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬದವರಿಗೆ ಅಗತ್ಯ ಹಣಕಾಸಿನ ನೆರವು ನೀಡಲು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 + twelve =
Remember me
