ಚೆನ್ನೈ:ಐವತ್ತೈದು ಪ್ರಯಾಣಿಕರಿದ್ದ ಟೂರಿಸ್ಟ್ ಬಸ್ಸೊಂದು ಕಂದಕಕ್ಕೆ ಉರುಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಟು ಮಂದಿ ಸಾವಿಗೀಡಾಗಿದ್ದು, ಸುಮಾರು 35 ಜನರು ಗಾಯಗೊಂಡಿದ್ದಾರೆ. ತಮಿಳುನಾಡಿನ ಮರಪಲಂ ಎಂಬಲ್ಲಿ ಇಂದು ಸಂಜೆ ಈ ಅಪಘಾತ ಸಂಭವಿಸಿದೆ.
ಊಟಿಯಿಂದ ಹೊರಟಿದ್ದ ಈ ಟೂರಿಸ್ಟ್​ ಬಸ್​ ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಳ್ಯಂ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕುನೂರ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿದೆ.
ಪರಿಣಾಮವಾಗಿ, ಬಸ್​ನಲ್ಲಿದ್ದ ಸುಮಾರು 35 ಪ್ರಯಾಣಿಕರು ಗಾಯಗೊಂಡಿದ್ದು, ಆ ಪೈಕಿ ಕನಿಷ್ಠ 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುನೂರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಅಪಘಾತದಲ್ಲಿ 8 ಮಂದಿ ಸಾವಿಗೀಡಾಗಿದ್ದಾರೆ. ಸತ್ತವರ ಪೈಕಿ ಮೂವರು ಮಹಿಳೆಯರು, ಐವರು ಪುರುಷರು ಎಂಬುದಾಗಿ ಕುನೂರ್ ಸರ್ಕಾರಿ ಆಸ್ಪತ್ರೆಯ ಜಂಟಿ ನಿರ್ದೇಶಕ ಪಳನಿ ಸ್ವಾಮಿ ತಿಳಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬಾಲಕಿ ಬರೆದ ಪತ್ರಕ್ಕೆ ಎರಡು ಗಂಟೆಯಲ್ಲೇ ಸಿಎಂ ಕಚೇರಿ ಸ್ಪಂದನೆ; ವಿಜಯವಾಣಿಗೆ ಮನವಿ ಮಾಡಿದ್ದ 3ನೇ ತರಗತಿ ವಿದ್ಯಾರ್ಥಿನಿ

ಓ.. ಮತ್ತೆ ಸದ್ದು ಮಾಡುತ್ತಿರುವ ‘ಕಾಂತಾರ’; ವರ್ಷದ ಬಳಿಕವೂ ನೆನಪಿಸಿಕೊಳ್ಳುತ್ತಿರುವ ಜನರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − twelve =
Remember me
