ಮನಾಲಿ:ವಿಶ್ವದಲ್ಲೇ ಅತಿ ಉದ್ದದ ಅಟಲ್​ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದು (ಅ. 3 ಶನಿವಾರ) ಲೋಕಾರ್ಪಣೆಗೊಳಿಸಿದರು.
ಹಿಮಾಲಚ ಪ್ರದೇಶದ ರೋಹ್ಟಾಂಗ್​ನಲ್ಲಿ ನಿರ್ಮಿಸಲಾಗಿರುವ ಅಟಲ್​ ಸುರಂಗ ಮಾರ್ಗದ ಪ್ರಮುಖ 10 ಆಸಕ್ತಿಕರ ಸಂಗತಿಗಳು ಈ ಕೆಳಕಂಡಂತಿವೆ….
1. ಅಟಲ್​ ಸುರಂಗವನ್ನು ನಿರ್ಮಿಸುವ ತೀರ್ಮಾನವನ್ನು 2000, ಜೂನ್​ 3ರಂದು ಅಂದಿನ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರು ತೆಗೆದುಕೊಂಡಿದ್ದರು. 2002, ಮೇ 26ರಂದು ಸುರಂಗ ಮಾರ್ಗಕ್ಕೆ ಶಂಕುಸ್ಥಾಪನೆ ನೇರವೇರಿಸಲಾಗಿತ್ತು.2. 2019, ಡಿಸೆಂಬರ್​ 25ರಂದು ರೋಹ್ಟಾಂಗ್​ ಸುರಂಗ ಮಾರ್ಗವನ್ನು ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ “ಅಟಲ್​​ ಸುರಂಗ” ಎಂದು ಮರುನಾಮಕರಣ ಮಾಡಲಾಯಿತು.3. ಅಲಟ್​​ ಸುರಂಗವೂ ಮನಾಲಿಯಿಂದ 25 ಕಿ.ಮೀ ದೂರದಲ್ಲಿ 3,060 ಮೀಟರ್ ಎತ್ತರದಲ್ಲಿ ನಿರ್ಮಾಣವಾಗಿದೆ. ಸಮುದ್ರ ಮಟ್ಟದಿಂದ 10 ಸಾವಿರ ಅಡಿ ಎತ್ತರದಲ್ಲಿ ಸುರಂಗವನ್ನು ನಿರ್ಮಿಸಲಾಗಿದೆ.4. ಸುರಂಗವೂ ಸುಮಾರು 9.02 ಕಿ.ಮೀ ಉದ್ದವಿದೆ. ಅಲ್ಟ್ರಾ-ಮಾಡರ್ನ್​ ವಿಶೇಷತೆಗಳಿಂದ ಹಿಮಾಲಯದ ಪಿರ್​ ಪಂಜಲ್​ ಶ್ರೇಣಿಯಲ್ಲಿ ನಿರ್ಮಿಸಲಾಗಿದೆ.5. ವಿಶ್ವದಲ್ಲೇ ಅತಿ ಉದ್ದದ ಹೆದ್ದಾರಿ ಸುರಂಗ ಎಂಬ ಖ್ಯಾತಿಗೆ ಅಟಲ್​ ಸುರಂಗ ಮಾರ್ಗ ಭಾಜನವಾಗಿದ್ದು, ಇದು ಮನಾಲಿ ಮತ್ತು ಲೇಹ್​ ನಡುವೆ 46 ಕಿ.ಮೀ ಅಂತರವನ್ನು ತಗ್ಗಿಸಲಿದ್ದು, ಪ್ರಯಾಣದ ದೂರ 4 ರಿಂದ 5 ಗಂಟೆ ತೆಗೆದುಕೊಳ್ಳಲಿದೆ.6. ಸುರಂಗವೂ ಕುದರೆ ಲಾಳದ ಆಕಾರದಲ್ಲಿದೆ. ಸಿಂಗಲ್​ ಟ್ಯೂಬ್ ಡಬಲ್ ಲೇನ್ ಸುರಂಗವು 8 ಮೀಟರ್ ರಸ್ತೆಮಾರ್ಗವನ್ನು ಹೊಂದಿದೆ ಮತ್ತು 5.525 ಮೀಟರ್ ಓವರ್​ ಹೆಡ್​ ಕ್ಲಿಯರೆನ್ಸ್ ಹೊಂದಿದೆ.7. ಗಂಟೆಗೆ ಗರಿಷ್ಠ 80 ಕಿ.ಮೀ ವೇಗದಲ್ಲಿ ದಿನಕ್ಕೆ 3,000 ಕಾರುಗಳು ಮತ್ತು 1,500 ಟ್ರಕ್‌ಗಳ ಸಂಚಾರ ಸಾಂದ್ರತೆಗಾಗಿ ಇದನ್ನು ವಿನ್ಯಾಸಗೊಳಿಸಲಾಗಿದೆ.8. ಸುರಂಗವೂ 10.5 ಮೀಟರ್​ ಅಗಲವಿದೆ ಮತ್ತು 3.6 X 2.25 ಮೀಟರ್​ ಅಗ್ನಿ ನಿರೋಧಕ ತುರ್ತು ಪ್ರಗತಿ ಸುರಂಗವನ್ನು ಮುಖ್ಯ ಸುರಂಗದಲ್ಲಿಯೇ ನಿರ್ಮಿಸಲಾಗಿದೆ.9. ಸಿಸಿಟಿವಿ ಕ್ಯಾಮೆರಾ, ಯಾವುದೇ ತುರ್ತು ಪರಿಸ್ಥಿತಿಗಾಗಿ ಪ್ರತಿ 150 ಮೀಟರ್​ಗೆ ಟೆಲಿಫೋನ್ ಸಂಪರ್ಕ, ಪ್ರತಿ 60 ಮೀಟರ್​ಗೆ ಅಗ್ನಿಶಾಮಕ ಯಾಂತ್ರಿಕ ವ್ಯವಸ್ಥೆ ಮತ್ತು ಸ್ವಯಂ ಘಟನೆ ಪತ್ತೆ ವ್ಯವಸ್ಥೆ ಸೇರಿದಂತೆ ಸುರಂಗದಲ್ಲಿ ವಿವಿಧ ರೀತಿಯ ಭದ್ರತಾ ಸಾಧನಗಳಿವೆ.10. ಪ್ರತಿ 25 ಮೀಟರ್‌ನಲ್ಲಿ ಸ್ಥಳಾಂತರಿಸುವ ದೀಪಗಳು ಮತ್ತು ನಿರ್ಗಮನ ಚಿಹ್ನೆಗಳು ಮತ್ತು ವಿಸ್ತರಣಾ ವ್ಯವಸ್ಥೆಗಳಿವೆ.
https://www.youtube.com/watch?v=wnVriE1mB4o
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 10 =
Remember me
